ಫುಟ್ಬಾಲ್ ಪಂದ್ಯಾಟದಲ್ಲಿ ಡಾ.ಎನ್ ಎಸ್ ಎ ಎಂ ಕಾಲೇಜು ನಿಟ್ಟೆಯ ವಿದ್ಯಾರ್ಥಿನಿ ಸ್ಮೃತಿ ಕೆ ಶೆಟ್ಟಿ ಕುಂಟಾಡಿ ರಾಜ್ಯ ಮಟ್ಟಕ್ಕೆ ಆಯ್ಕೆ
Saturday, September 20, 2025
ಬೆಳ್ಮಣ್ : ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ, ಹಾಗೂ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಡಾ.ಎನ್.ಎಸ್.ಎ.ಎಂ ಕಾಲೇಜು ನಿಟ್ಟೆಯ ವಿದ್ಯಾರ್ಥಿನಿ ಸ್ಮೃತಿ ಕೆ ಶೆಟ್ಟಿ ಕುಂಟಾಡಿ ಇವರು ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಮುಂದಿನ ಪಂದ್ಯಾಟ ದಾವಣಗೆರೆಯಲ್ಲಿ ನಡೆಯಲಿದೆ