ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಭಜನಾ ಸೇವೆಯ ಉದ್ಘಾಟನೆ
Monday, September 22, 2025
ಕಟೀಲು:ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಭಜನಾ ಸೇವೆಯ ಉದ್ಘಾಟನೆ ದೇವಳದ ಸರಸ್ವತೀ ಸದನದಲ್ಲಿ ನಡೆಯಿತು. ದೇವಳದ ಪ್ರಧಾನ ಅರ್ಚಕ ವೆಂಕಟರಮಣ ಆಸ್ರಣ್ಣ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಕಟೀಲು ಮಹಿಳಾ ಹಾಲು ಉತ್ಪದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಅಮೂಲ್ಯ ಶೆಟ್ಟಿ, ಜ್ಯೂತಿ ಉಡುಪ ಮತ್ತಿತರರು ಉಪಸ್ಥಿತರಿದ್ದರು, ನವರಾತ್ರಿ ಉತ್ಸವ ಕಾಲದಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೆ ವಿವಿಧ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ