ಸೆ.7:ಕೊಡೆತ್ತೂರು ಗ್ರಾಮೋತ್ಸವ - 2025
Wednesday, September 3, 2025
ಕಿನ್ನಿಗೋಳಿ; ಕಿನ್ನಿಗೋಳಿ ಸಮೀಪದ ಕೊಡೆತ್ತೂರು ಶ್ರೀ ಅರಸು ಕುಂಜರಾಯ ದೈವಸ್ಥಾನದ ಬಾಕಿಮಾರು ಗದ್ದೆಯಲ್ಲಿ ಸೆಪ್ಟೆಂಬರ್ 7 ರಂದು ಬೆಳಿಗ್ಗೆ 8.00 ರಿಂದ ಸಂಜೆ 6.00 ಗಂಟೆಯವರೆಗೆ ಕೊಡೆತ್ತೂರು ಗ್ರಾಮೋತ್ಸವ ನಡೆಯಲಿದೆ, ಕಾರ್ಯಕ್ರಮದಲ್ಲಿ ಕೃಷಿಕ್ಷೇತ್ರದ ಸಾಧಕರಿಕೆ ಅತ್ಯುತ್ತಮ ಕೃಷಿ ಸಾಧಕ ಪ್ರಶಸ್ತಿ, ಮತ್ತು ಶ್ರಮ ಜೀವಿ ಪ್ರಶಸ್ತಿ ಪ್ರಧಾನ, ಪುರುಷರಿಗೆ, ಮಹಿಳೆಯರಿಗೆ, ಮಕ್ಕಳಿಗೆ ವಿವಿಧ ಆಟೋಟ ಸ್ಪರ್ದೆಗಳು ನಡೆಯಲಿದ್ದು ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಣೆ ನಡೆಯಲಿದೆ, ಕಾರ್ಯಕ್ರಮದಲ್ಲಿ ಕಟೀಲು ದೇವಳದ ಅರ್ಚಕ ಅನಂತಪದ್ಮನಾಭ ಆಸ್ರಣ್ಣ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಕೋಟ್ಯಾನ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.