ಮುಲ್ಕಿ: ಸರಕಾರಿ ಶಾಲೆ ಅಭಿವೃದ್ಧಿಗೆ ಗ್ರಾಮಸ್ಥರ ಕೊಡುಗೆ ಅಗತ್ಯ - ಡಾ ಹರಿಕೃಷ್ಣ ಪುನರೂರು
Tuesday, September 2, 2025
ಮುಲ್ಕಿ: ಮಾನಂಪಾಡಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯು ಶತಮಾನೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಶಾಲೆಯ ಅಭಿವೃದ್ಧಿ ಹಾಗೂ ವಿದ್ಯಾನಿಧಿ ಸಂಗ್ರಹದ ಪ್ರಯುಕ್ತ ಮನವಿ ಪತ್ರ ಬಿಡುಗಡೆ ಸಮಾರಂಭ ಶಾಲಾ ಸಭಾಭವನದಲ್ಲಿ ನಡೆಯಿತು
ಕ.ಸಾ.ಪ. ಮಾಜೀ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ ಹರಿಕೃಷ್ಣ ಪುನರೂರು ಮನವಿ ಪತ್ರ ಬಿಡುಗಡೆ ಮಾಡಿ ಮಾತನಾಡಿ
ಸರಕಾರಿ ಶಾಲೆ ಎಂಬ ಕೀಳರಿಮೆ ಬಿಟ್ಟು ಶಾಲೆಯ ಸಮಗ್ರ ಅಭಿವೃದ್ಧಿಗೆ ಹಳೆ ವಿದ್ಯಾರ್ಥಿಗಳ ಹಾಗೂ ಗ್ರಾಮಸ್ಥರ ಕೊಡುಗೆ ಅಗತ್ಯ. ಶಾಲೆಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ದಾನಿಗಳು, ನಾಗರಿಕರು ಮುಂದೆ ಬರಬೇಕಾಗಿದೆ ಶತಮಾನೋತ್ಸವ ಆಚರಿಸುತ್ತಿರುವ ಶಾಲೆಯ ಸಮಗ್ರ ಅಭಿವೃದ್ಧಿಗೆ ಪಣತೊಡಬೇಕಾಗಿದೆ ಎಂದರು
ಮುಖ್ಯ ಅತಿಥಿಗಳಾಗಿ ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್, ಶಾಲಾ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾರಾಯಣ ಶೆಣೈ, ಉದ್ಯಮಿ ಪ್ರಬೋದ್ ಕುಡ್ವ, ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ನವೀನ್ ಶೆಟ್ಟಿ, ಉದ್ಯಮಿ ರಮಾನಾಥ ಪೈ, ಸಂತೋಷ್ ಶೆಟ್ಟಿ, ಮಾನಂಪಾಡಿ ಮಹಿಳಾ ಮಂಡಳಿಯ ಅಧ್ಯಕ್ಷೆ ಗುಲಾಬಿ ಭಂಡಾರಿ, ಶಾಲಾ ಶಿಕ್ಷಕಿ ಶೋಭಾ ಉಪಸ್ಥಿತರಿದ್ದರು.