ಬಪ್ಪನಾಡಿಗೆ ರಾಜ್ಯ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ವಿನಯ ತಿಮ್ಮಾಪುರ್ ಭೇಟಿ
Monday, October 13, 2025
ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ರಾಜ್ಯ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ವಿನಯ ತಿಮ್ಮಾಪುರ್ ಅವರು ಭೇಟಿ ನೀಡಿ ದೇವಿಯ ದರ್ಶನ ಪಡೆದು ಪ್ರಸಾದವನ್ನು ಸ್ವೀಕರಿಸಿದರು.
ಮೂಲ್ಕಿ ಬ್ಲಾಕ್ ಯುವ ಕಾಂಗ್ರೆಸ್‌ನ ನಿಕಟಪೂರ್ವ ಅಧ್ಯಕ್ಷ ಅಶೋಕ್ ಪೂಜಾರ್ ಅವರು ವಿನಯ ತಿಮ್ಮಾಪುರ್ ಅವರನ್ನು ವಿಶೇಷವಾಗಿ ಸ್ವಾಗತಿಸಿ, ಮೂಲ್ಕಿ ಮೂಡಬಿದಿರೆ ಕ್ಷೇತ್ರದ ಯುವ ಕಾಂಗ್ರೆಸ್ ಸಂಘಟನೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮುಂದಿನ ದಿನದಲ್ಲಿ ಯುವ ಕಾಂಗ್ರೆಸ್ ಹಮ್ಮಿಕೊಳ್ಳುವ ವಿಶೇಷ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ವಿನಂತಿಸಿಕೊಳ್ಳಲಾಯಿತು. ವಿನಯ ತಿಮ್ಮಾಪುರ್ ಅವರು ಸ್ಪಂದಿಸಿ ಯುವ ಕಾಂಗ್ರೆಸ್ ಉತ್ತಮ ರೀತಿಯಲ್ಲಿ ಸಂಘಟಿಸಿರಿ ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ರಕ್ಷಿತ್ ಪೂಜಾರಿ ಕೊಳಚಿಕಂಬಳ, ರಿತೇಶ್ ಸಾಲ್ಯಾನ್ ಸಸಿಹಿತ್ಲು, ಸೋನು ಜೊತೆಯಲ್ಲಿದ್ದರು.