ಮನೆಯ ಮೇಲೆ ಬಿದ್ದ ಬೃಹತ್ ಗಾತ್ರದ ತೆಂಗಿನಮರ,ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪರಿಶೀಲನೆ
Saturday, October 18, 2025
ಸುರತ್ಕಲ್: ಸುರತ್ಕಲ್ ಸಮೀಪದ ಕುಚಿಗುಡ್ಡೆ ಸಮೀಪ ಮನೆಯೊಂದರ ಮೇಲೆ ಬೃಹತ್ ಗಾತ್ರದ ತೆಂಗಿನ ಮರ ಬಿದ್ದು ಮನೆಯ ಮೇಲ್ಚಾವಣಿ ಎರಡು ಹೋಳಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.ಯಶೋಧ ಎಂಬುವವರ ಮನೆಗೆ ಬೃಹತ್ ಗಾತ್ರದ ತೆಂಗಿನ ಮರ ಬಿದ್ದಿದ್ದು,ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ ಭೇಟಿ ನೀಡಿ ಹಾನಿಗೀಡಾದ ಮನೆ ಪರಿಶೀಲನೆ ನಡೆಸಿದರು.ಮನೆಯಲ್ಲಿ ಯಶೋಧ ಹಾಗೂ ಅವರ ಪುತ್ರಿ ಸ್ಪೂರ್ತಿ ಇದ್ದರು.ಘಟನಾ ವೇಳೆ ಮನೆಯಿಂದ ಹೊರ ಓಡಿ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹಾನಿಗೀಡಾದ ಮನೆಗೆ ಭೇಟಿ ನೀಡಿದ ಶಾಸಕರು, ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಪ್ರಕೃತಿ ವಿಕೋಪದಡಿ ಮನೆಯ ಪುನರ್ ನಿರ್ಮಾಣಕ್ಕೆ ಬೇಕಾದ ಪರಿಹಾರ ಒದಗಿಸುವಂತೆ ಸೂಚನೆ ನೀಡಿದರು.