ಸ್ವಚ್ಚತೆ ಪ್ರತೀ ನಾಗರಿಕನ ಕರ್ತವ್ಯ : ಜೈ ಶಂಕರ್
Thursday, November 20, 2025
ಕಿನ್ನಿಗೋಳಿ : ಸ್ವಚ್ಚತೆ ಪ್ರತೀ ನಾಗರಿಕನ ಕರ್ತವ್ಯವಾಗಿದೆ. ಪರಿಸರವನ್ನು ಸ್ವಚ್ಚವಾಗಿಟ್ಟಲ್ಲಿ ಆರೋಗ್ಯವನ್ನು ರಕ್ಷಿಸಿಕೊಳ್ಳಬಹುದು.ಪ್ಲಾಸ್ಟಿಕ್ ವಸ್ತುಗಳನ್ನು ದೂರಮಾಡಿಕೊಂಡು ಪರಿಸರ ಸ್ನೇಹಿಯಾಗಿ ಬಾಳೋಣ ಎಂದು ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಜೈ ಶಂಕರ್ ಹೇಳಿದರು. ಅವರು ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯ ಸಂಯೋಜನೆಯಲ್ಲಿ ನಡೆದ ಸ್ವಚ್ಚ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾ ಸಂಜೀವಿನಿ ಆಸ್ಪತ್ರೆಯಿಂದ ಕಟೀಲು ದೇವಸ್ಥಾನದವರೆಗೆ ಕಟೀಲು ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳೊಂದಿಗೆ ಕಾಲ್ನಡಿಗೆ ಜನಜಾಗೃತಿ ಕಾರ್ಯಕ್ರಮ ನಡೆಯಿತು. ಕಟೀಲು ಬಸ್ ನಿಲ್ದಾಣದಲ್ಲಿ ಬೀದಿ ನಾಟಕ, ಕಿನ್ನಿಗೋಳಿ ಸಂತೆ ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ಬಗ್ಗೆ ಜಾಗೃತಿ ಮತ್ತು ಉಚಿತ ಬಟ್ಟೆಯ ಕೈಚೀಲಗಳನ್ನು ವಿತರಿಸಲಾಯಿತು.
ಆರೋಗ್ಯಾಧಿಕಾರಿ ಬ್ರಹ್ಮಾನಂದ, ಕಂದಾಯ ನಿರೀಕ್ಷಕ ರಾಘವೇಂದ್ರ, ಇಂಜಿನಿಯರಿಂಗ್ ವಿಭಾಗದ ಪವನ್ ಕುಮಾರ್ ಹಾಗೂ ಸಿಬ್ಬಂದಿ ವರ್ಗ, ಪ್ರಮುಖರಾದ ಈಶ್ವರ್ ಕಟೀಲ್, ಪ್ರಕಾಶ್ ಆಚಾರ್ಯ, ಪ್ರೇಮ್‌ರಾಜ್ ಶೆಟ್ಟಿ, ಕಾರ್ಯಕ್ರಮದ ಸಹ ಸಂಯೋಜನೆಯ ಮೂಲ್ಕಿ ಸುಧಾಮ ಫೌಂಡೇಶನ್‌ನ ಶೈಲೇಶ್ ಕುಮಾರ್, ನವೀನ್ ರಾಜ್, ವೀರಣ್ಣ, ರಮೇಶ್, ಶಿಕ್ಷಣ ಸಂಸ್ಥೆಯ ಪ್ರಮುಖರು, ಮತ್ತಿತರರು ಇದ್ದರು.