ನ. 7:ಕಿನ್ನಿಗೋಳಿಯ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ವತಿಯಿಂದ ವಿಶೇಷ ಚೇತನ ಮಕ್ಕಳ ಹಬ್ಬ ಕಾರ್ಯಕ್ರಮ
Wednesday, November 5, 2025
ಕಿನ್ನಿಗೋಳಿ : ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ವತಿಯಿಂದ ವಿಶೇಷ ಚೇತನ ಮಕ್ಕಳ ಹಬ್ಬ ಕಾರ್ಯಕ್ರಮ ನ.7ರಂದು ಶುಕ್ರವಾರ ಬೆಳಿಗ್ಗೆ 11ಗಂಟೆಗೆ ಕಿನ್ನಿಗೋಳಿ ಸೈಂಟ್ ಮೇರಿಸ್ ಸ್ಪೆಷಲ್ ಸ್ಕೂಲ್ ನ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಅಧ್ಯಕ್ಷ ನಿಡ್ಡೋಡಿ ಚಾವಡಿ ಮನೆ ಜಗನ್ನಾಥ ಶೆಟ್ಟಿ ಹೇಳಿದರು. ಅವರು ಕಿನ್ನಿಗೋಳಿ ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿಯನ್ನು ನೀಡಿದರು. ಕಿನ್ನಿಗೋಳಿ ಕೊಸೆಸಾಂವ್ ಅಮ್ಮನವರ ಚರ್ಚ್ ನ ಪ್ರಧಾನ ಧರ್ಮಗುರುಗಳಾದ ವಂದನೀಯ ಫಾ. ಜೋಕಿಂ ಫೆರ್ನಾಂಡಿಸ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಉದ್ಘಾಟಿಸಲಿದ್ದಾರೆ. ಕಿನ್ನಿಗೋಳಿಯ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಅಧ್ಯಕ್ಷ ಡಾ. ಜಗನ್ನಾಥ ಶೆಟ್ಟಿ ನಿಡ್ಡೋಡಿ ಚಾವಡಿಮನೆ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿರುವರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು,ಕಿನ್ನಿಗೋಳಿ ಯುಗಪುರುಷದ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ,
ರಾಜ್ಯ ಸರಕಾರದ ಪರಿಸರ ಮತ್ತು ಪ್ರವಾಸೋದ್ಯಮ ನಿಗಮ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ ,
ಗೌರವ ಉಪಸ್ಥಿತರಾಗಿ ಕಿನ್ನಿಗೋಳಿ ಸೈಂಟ್ ಮೇರಿಸ್ ಸ್ಪೆಷಲ್ ಸ್ಕೂಲ್ ನ ಪ್ರಾಂಶುಪಾಲರಾದ ರೇಷ್ಮಾ ಮಾರ್ಟಿಸ್ ಉಪಸ್ಥಿತಲಿರುವರು. ನಂತರ ಟ್ರಸ್ಟಿಗಳು, ಅತಿಥಿಗಳು, ಪೋಷಕರು, ಶಿಕ್ಷಕಿಯರು ಮತ್ತು ವಿಶೇಷ ಚೇತನ ಮಕ್ಕಳೊಂದಿಗೆ ಸಹ ಭೋಜನ ಇರಲಿದೆ ಎಂದು ಅವರು ತಿಳಿಸಿದರು
ಸುದ್ದಿಗೋಷ್ಠಿಯಲ್ಲಿ ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಸಂಚಾಲಕ ನಿವೃತ್ತ ಪ್ರಾಧ್ಯಾಪಕ ನರಸಿಂಹ ಮಡಿವಾಳ ಉಪಸ್ಥಿರಿದ್ದರು.