-->
ಮೂಲ್ಕಿ ಬಾಲಿಕಾಶ್ರಮದಲ್ಲಿ ಮಕ್ಕಳ ದಿನಾಚರಣೆಯ ಸಂಭ್ರಮ.ಮಕ್ಕಳ ಆತ್ಮಸ್ಥೈರ್ಯ ಹೆಚ್ಚಿಸೋಣ : ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ

ಮೂಲ್ಕಿ ಬಾಲಿಕಾಶ್ರಮದಲ್ಲಿ ಮಕ್ಕಳ ದಿನಾಚರಣೆಯ ಸಂಭ್ರಮ.ಮಕ್ಕಳ ಆತ್ಮಸ್ಥೈರ್ಯ ಹೆಚ್ಚಿಸೋಣ : ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ

ಮಂಗಳೂರು : ಮಕ್ಕಳಲ್ಲಿನ ಆತ್ಮಸ್ಥೈರ್ಯವನ್ನು ಹೆಚ್ಚಿಸಲು ನಾವೆಲ್ಲ ಪ್ರಯತ್ನ ಪಟ್ಟಲ್ಲಿ ಅವರಲ್ಲಿನ ಮನೋವಿಕಸನ ಸಾಧ್ಯವಿದೆ. ಮಕ್ಕಳಲ್ಲಿ ದೇವರನ್ನು ಕಾಣುವ ನಾವು ಅವರಲ್ಲಿನ ಭಾವನೆಗಳನ್ನು ಅರ್ಥೈಸಿಕೊಳ್ಳಬೇಕು, ಮಕ್ಕಳ ಮನಸ್ಸನ್ನು ಗೆದ್ದು ಅವರಲ್ಲಿ ಉತ್ಸಾಹ ತುಂಬಿ, ಸೂಕ್ತ ಶಿಕ್ಷಣ ನೀಡುವ ಮೂಲಕ ಅವರನ್ನು ಭಾರತದ ಸತ್ಪ್ರಜೆಗಳನ್ನಾಗಿ ಮಾಡುವ ಜವಬ್ದಾರಿ ಪೋಷಕರದ್ದಾಗಿದೆ ಎಂದು ಆಧ್ಯಾತ್ಮಿಕ ವಿಶ್ವಗುರು, ಅಂತಾರಾಷ್ಟ್ರೀಯ ವಾಸ್ತುತಜ್ಞರು, ಜ್ಯೋತಿಷ್ಯರಾದ ಶ್ರೀ ಚಂದ್ರಶೇಖರ ಸ್ವಾಮೀಜಿ ನುಡಿದರು.  
ಅವರು ಮೂಲ್ಕಿಯ ಸಿಎಸ್‌ಐ ಬಾಲಿಕಾಶ್ರಮದಲ್ಲಿ ಶ್ರೀ ಚಂದ್ರಶೇಖರ ಸ್ವಾಮೀಜಿ ಸೇವಾಶ್ರಮದ ಸಂಯೋಜನೆಯಲ್ಲಿ ನಡೆದ ಮಕ್ಕಳ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಯುವ ಉದ್ಯಮಿ ರಾಹುಲ್ ಚಂದ್ರಶೇಖರ್ ಅವರು ವಿಶೇಷವಾಗಿ ಕಾರ್ಯಕ್ರಮವನ್ನು ಸಂಯೋಜಿಸಿ, ವಿವಿಧ ಶಿಕ್ಷಣ ಪರಿಕರಗಳನ್ನು ಎಲ್ಲಾ ಮಕ್ಕಳಿಗೆ ವಿತರಿಸಿ, ಮೂಲ್ಕಿಯ ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು  ಹಾಗೂ ಸೂಕ್ತವಾದ ಸ್ಪಂದನೆಯನ್ನು ಸೇವಾಶ್ರಮದ ಮೂಲಕ ನಡೆಸುವ ಭರವಸೆ ನೀಡಿದರು.  
ಸೇವಾಶ್ರಮದ ನಿರ್ದೇಶಕಿ ರಜನಿ ಸಿ. ಭಟ್, ರಾಘವ ಸೂರ್ಯ, ನ್ಯಾಯವಾದಿ ರೋಶನಿ ಚಂದ್ರಶೇಖರ್, ಉದ್ಯಮಿ ಎಂ. ಸಾದಿಕ್ ಅಹ್ಮದ್ ಉಡುಪಿ, ಬಾಲಿಕಾಶ್ರಮದ ಮೇಲ್ವಿಚಾರಕಿ ಶಾಂತಿ ಮತ್ತಿತರರು ಉಪಸ್ಥಿತರಿದ್ದರು.
ಆಶ್ರಮದ ಸಂಚಾಲಕ ಪುನಿತ್‌ಕೃಷ್ಣ ಸ್ವಾಗತಿಸಿದರು, ವಕ್ತಾರ ನರೇಂದ್ರ ಕೆರೆಕಾಡು ಕಾರ್ಯಕ್ರಮ ನಿರೂಪಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ