ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ನಗರ ಆಶ್ರಯ ಸಮಿತಿ ಸಭೆ
Thursday, December 4, 2025
ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ನಗರ ಆಶ್ರಯ ಸಮಿತಿ ಸಭೆಯು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಗುರುವಾರದಂದು ಊರ್ವಸ್ಟೋರ್ ನಲ್ಲಿರುವ ಡಾ|| ಬಿ.ಆರ್. ಅಂಬೇಡ್ಕರ್ ಸಭಾ ಭವನದಲ್ಲಿ ಜರುಗಿತು.
ಸಭೆಯಲ್ಲಿ ಸುರತ್ಕಲ್ ಗ್ರಾಮದ ಸರ್ವೆ ನಂ. 108/1ಎ1ಬಿ ರಲ್ಲಿ ಜಿ+3 ಮಾದರಿಯಲ್ಲಿ ನಿರ್ಮಾಣವಾಗುತ್ತಿರುವ ವಸತಿ ಸಮುಚ್ಛಯವನ್ನು ಪ್ಲಾಟ್ ಸಂಖ್ಯೆ ಹಂಚಿಕೆಯನ್ನು ಲಾಟರಿ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಿತು.
ಈ ಸಂದರ್ಭ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ,ಮಹಾನಗರ ಪಾಲಿಕೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ತಹಶೀಲ್ದಾರ್ ಉಪಸ್ಥಿತರಿದ್ದರು.