ವಿದ್ಯಾರ್ಥಿಗಳ ಈ ಸಾಧನೆ ಅವರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ಪೋಷಕರ ಬೆಂಬಲದ ಫಲ - ಭುವನಾಭಿರಾಮ ಉಡುಪ
Thursday, January 29, 2026
ಕಿನ್ನಿಗೋಳಿ:ವಿದ್ಯಾರ್ಥಿಗಳ ಈ ಸಾಧನೆ ಅವರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ಪೋಷಕರ ಬೆಂಬಲದ ಫಲವಾಗಿದೆ. ಅಂಕಗಳು ಜೀವನದ ಅಂತಿಮ ಗುರಿಯಲ್ಲ. ಆದರೆ ಅವು ಶಿಸ್ತಿನ, ಪರಿಶ್ರಮದ ಹಾಗೂ ಆತ್ಮವಿಶ್ವಾಸದ ಸಂಕೇತ. ವಿದ್ಯಾರ್ಥಿಗಳು ಮುಂದಿನ ಹಂತದಲ್ಲೂ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಉಪಯುಕ್ತ ನಾಗರಿಕರಾಗಬೇಕು ಎಂದು ಶ್ರೀ ಶಾರದಾ ಸೊಸೈಟಿ ಶಿಮಂತೂರಿನ ಕೋಶಾಧಿಕಾರಿ ಕೆ. ಭುವನಾಭಿರಾಮ ಉಡುಪ ಹೇಳಿದರು.ಅವರು ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನ ಶಿಕ್ಷಕರಕ್ಷಕ ಸಂಘದ ವತಿಯಿಂದ ಆಯೋಜಿಸಿದ ಗೌರವಾರ್ಪಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಶಾಲಾ ಸಂಚಾಲಕ ದೇವಪ್ರಸಾದ್ ಪುನರೂರು ಮಾತನಾಡಿ ಶಾಲೆ, ಶಿಕ್ಷಕರು ಮತ್ತು ಪೋಷಕರು ಒಟ್ಟಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಗೌರವಿಸಲ್ಪಟ್ಟ ವಿದ್ಯಾರ್ಥಿಗಳು ಇತರರಿಗೆ ಮಾದರಿಯಾಗಲಿ ಎಂದರು.
ಕಳೆದ ಶೈಕ್ಷಣಿಕ ವರ್ಷ 2025ರಲ್ಲಿ ಸಿಬಿಎಸ್ಇ 10ನೇ ತರಗತಿಗೆ ನಡೆಸಿದ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಶಾಲಾ ವಿದ್ಯಾರ್ಥಿಗಳಾದ ಶ್ರೇಯ ವಿ ದೇವಾಡಿಗ, ಸನಾ ಫಾತಿಮಾ, ಅಮಿತ್ ಕೋಟ್ಯಾನ್ ರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.
ಶಿಕ್ಷಕರಕ್ಷಕ ಸಂಘದ ಅಧ್ಯಕ್ಷೆ ಸುಮನ, ಜೊತೆ ಕಾರ್ಯದರ್ಶಿ ಪೂರ್ಣಿಮಾ ಉಪಸ್ಥಿತರಿದ್ದರು.
ಶಾಲಾ ಪ್ರಾಚಾರ್ಯ ಜಿತೇಂದ್ರ ವಿ ರಾವ್ ಹೆಜಮಾಡಿ ಪ್ರಾಸ್ತವಿಕವಾಗಿ ಮಾತನಾಡಿದರು. ಸಹ ಶಿಕ್ಷಕಿ ವನಿತ ಸಂತೋಷ ಸ್ವಾಗತಿಸಿದರು. ದೀಪಿಕಾ ಶೆಟ್ಟಿ ವಂದಿಸಿದರು.ಕಾಂತಿ ಕೆ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.