ಏಳಿಂಜೆ ದಂಪತಿ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ,ದಂಡ
Tuesday, January 20, 2026
ಕಿನ್ನಿಗೋಳಿ : ಕಿನ್ನಿಗೋಳಿ ಸಮೀಪದ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಎಂಬಲ್ಲಿ ದಂಪತಿಯನ್ನು ಕೊಂದ ಆರೋಪಿ ಆರೋಪಿ ಆಲ್ಫೋನ್ಸ್ ಸಲ್ದಾನ ಎಂಬಾತನಿಗೆಪ್ರಸ್ತುತ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ರವರು ಅರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ನ್ಯಾಯಾಲಯ ಜೀವಾವಧಿ ಶಿಕ್ಷೆ. ಹಾಗೂ 2 ಲಕ್ಷ ರೂ ದಂಡ ವಿಧಿಸಿದೆ
ಕಿನ್ನಿಗೋಳಿ ಸಮೀಪದ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ
ಆಗಿಂದಕಾಡು ಎಂಬಲ್ಲಿ 2020ನೇ ಎಪ್ರಿಲ್ 29ರಂದು ಆರೋಪಿ ಆಲ್ಫೋನ್ಸ್ ಸಲ್ದಾಣನು ತನ್ನ ನೆರೆಕರೆ ಮನೆಯ ವಿನ್ಸಿ ಯಾನೆ ವಿನ್ಸೆಂಟ್ ಡಿ.ಸೋಜಾನನ್ನು ಮರದ ಗೆಲ್ಲು ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ವಿನ್ಸಿ ಯಾನೆ ವಿನ್ಸೆಂಟ್ ಡಿ.ಸೋಜಾನನ್ನು ರಾಜಿ ಪಂಚಾಯತಿಕೆ ಮಾಡುವ ನೆಪದಲ್ಲಿ ತನ್ನ ಮನೆಗೆ ಕರೆಸಿ ಗಲಾಟೆ ಮಾಡಿ ಚೂರಿಯಿಂದ ತಿವಿದು ಕೊಲೆ ಮಾಡಿದ್ದಲ್ಲದೇ, ರಕ್ಷಿಸಲು ಧಾವಿಸಿ ಬಂದ ವಿನ್ಸಿ ಯಾನೆ ವಿನ್ಸೆಂಟ್ ಡಿ.ಸೋಜಾನ ಪತ್ನಿ ಹೆಲೆನ್ ಡಿ.ಸೋಜಾ ಯಾನೆ ಹೆಲೆನ್ ರೋಸಿ ರೋಡ್ರಿಗಸ್ ಳನ್ನು ಅಟ್ಟಾಡಿಸಿ ಚೂರಿಯಿಂದ ಅಮಾನುಷವಾಗಿ ತಿವಿದು ಕೊಲೆ ಗೈದಿದ್ದು ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 31/2020 ಕಲಂ 341, 504, 506, 302 ಐಪಿಸಿ ರಂತೆ ಪ್ರಕರಣ ದಾಖಲಾಗಿತ್ತು
ಅಂದಿನ ಮುಲ್ಕಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಜಯರಾಮ ಡಿ. ಗೌಡ ರವರು ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದು ತನಿಖಾ ಸಹಾಯಕರಾಗಿ ಮುಲ್ಕಿ ಪೊಲೀಸ್ ಠಾಣೆಯ ಎಎಸ್ಐ ಉಮೇಶ್ ಕೆ ಹಾಗೂ ಹೆಚ್ ಸಿ. 725 ನೇ ವಾದಿರಾಜ ರವರು ತನಿಖಾ ಸಹಾಯಕರಾಗಿ ತನಿಖೆ ನಡೆಸಿದ್ದರು
ಪ್ರಕರಣವು ನ್ಯಾಯಾಲಯದಲ್ಲಿ ಎಸ್ ಸಿ ನಂಬ್ರ; 69/2020 ರಂತೆ ವಿಚಾರಣೆ ನಡೆದು 1ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನರವರು ವಿಚಾರಣೆ ನಡೆಸಿ ಪ್ರಸ್ತುತ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ರವರು ಅರೋಪಿಗೆ ಜ 19 ರಂದು ಜೀವಾವಧಿ ಶಿಕ್ಷೆ. ಹಾಗೂ 2 ಲಕ್ಷ ರೂ ದಂಡ ವಿಧಿಸಿದ್ದಾರೆ
ಸಾಕ್ಷಿ ವಿಚಾರಣೆ ಸಮಯ ಸರ್ಕಾರಿ ಅಭಿಯೋಜಕರಾದ ಜುಡಿತ್ ಓಲ್ಗಾ ಮಾರ್ಗರೇಟ್ ರವರು ಅಭಿಯೋಜನೆ ಪರ ವಾದ ಮಂಡಿಸಿದ್ದರು ನ್ಯಾಯಾಲಯದಲ್ಲಿ ಸಾಕ್ಷಿ ವಿಚಾರಣೆ ಸಂದರ್ಭ ಮುಲ್ಕಿ ಪೊಲೀಸ್ ಠಾಣಾ ಮಪಿಸಿ 827ನೇ ಕಾವ್ಯಾರವರು ಸಹಕರಿಸಿದ್ದರು