ಫೆ.11ರಿಂದ 14: ಹಳೆಯಂಗಡಿ ಕದಿಕೆ ಉರೂಸ್, ರಾಜ್ಯ ಮಟ್ಟದ ದಫ್ ಸ್ಪರ್ಧೆ
Monday, February 9, 2026
ಮಂಗಳೂರು : ಹಳೆಯಂಗಡಿ ಕದಿಕೆ ದರ್ಗಾ ಶರೀಫ್‌ನ ಹರ್ಝತ್ ಸೈಯದ್ ಮೌಲಾನವಲಿಯುಲ್ಲಾಹಿ ಉರೂಸ್ ಸಮಾರಂಭ ಫೆ. 11ರಿದ 14ರವರೆಗೆ ನಡೆಯಲಿದೆ ಎಂದು
ದರ್ಗಾ ಸಮಿತಿಯ ಅಧ್ಯಕ್ಷ ಅಬ್ದುಲ್ ರಹಿಮಾನ್ ಕುಡುಂಬೂರು ಹೇಳಿದರು.ಅವರು ಸೋಮವಾರದಂದು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಫೆ. 11ರಂದು ಸಂಜೆ 7 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು,ಅಲ್‌ಹಾಜ್ ಮುಹಮ್ಮದ್ ಅಝ್ಹರ್ ಫೈಝಿ ಬೊಳ್ಳೂರು ಉಸ್ತಾದ್ ದುವಾ ಆಶೀರ್ವಚನ ನೀಡಲಿದ್ದಾರೆ.ಸಾಗ್ ಬದ್ರಿಯಾ ಜುಮ್ಮಾ ಮಸೀದಿಯ ಖತೀಬ್ ಇ.ಎಂ. ಅಬ್ದುಲ್ಲಮದನಿ ಉದ್ಘಾಟಿಸಲಿದ್ದಾರೆ ಎಂದರು.
ಮತ ಪ್ರವಚನ, ಸ್ವಲಾತ್ ಮಜ್ಲಿಸ್ ಕಾರ್ಯಕ್ರಮ ಗಣ್ಯಾತೀಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ. ಫೆ.14ರ ರಾತ್ರಿ 7 ಗಂಟೆಗೆ ಸಂದಲ್ ಮೆರವಣಿಗೆ ನಡೆಯಲಿದೆ. ರಾತ್ರಿ 9 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಹಳೆಯಂಗಡಿ ಕದಿಕೆಕೇಂದ್ರ ಜುಮಾ ಮಸೀದಿಯ ಖತೀಬ್ ಪಿ.ಎ. ಅಬ್ದುಲ್ಲಝನಿ ಬಡಗನ್ನೂರು ಉದ್ಘಾಟನೆ ನೆರವೇರಿಸಲಿದ್ದಾರೆ.
ಎಸ್ಕೆಎಸ್ಸೆಸ್ಸೆಫ್ ಪ್ರಧಾನ ಕಾರ್ಯದರ್ಶಿ ಅನೀಸ್ ಕೌಸರಿ ಮುಖ್ಯ ಪ್ರಭಾಷಣ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಉಮಾನಾಥ ಕೋಟ್ಯಾನ್, ಮಾಜಿ ಶಾಸಕ ಅಭಯಚಂದ್ರ ಜೈನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ವಿಧಾನ ಪರಿಷತ್ ಸದಸಯ ಐವನ್ ಡಿಸೋಜಾ, ಹಿರಿಯ ಪತ್ರಕರ್ತ ಬಿ.ಎಂ. ಹನೀಫ್ ಸೇರಿದಂತೆ ಇತರ ರಾಜಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾ ಗೋಷ್ಟಿಯಲ್ಲಿ ಉಪಾಧ್ಯಕ್ಷ ಹಿಮಾಯತುಲ್ ಇಸ್ಲಾಂ ಜುಮಾ ಮಸೀದಿಯ ಅಧ್ಯಕ್ಷ ಅಶ್ರಫ್ ಪಡುತೋಟ, ಹಳೆಯಂಗಡಿ ಕದಿಕೆ ಕೇಂದ್ರ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಹಾಗೂ ಉರೂಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಚ್.ಕೆ. ಮುಹಮ್ಮದ್, ಕೇಂದ್ರ ಜುಮಾ ಮಸೀದಿಯ ಕೋಶಾಧಿಕಾರಿ ಫಕ್ರುದ್ದೀನ್ ಮುಂಚೂರು ಉಪಸ್ಥಿತರಿದ್ದರು.