-->

ಮಂಗಳೂರು - ಮೂಡುಬಿದಿರೆ  ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ,ಬದಲಿ ರಸ್ತೆ ಬಳಕೆಗೆ ಸೂಚನೆ

ಮಂಗಳೂರು - ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ,ಬದಲಿ ರಸ್ತೆ ಬಳಕೆಗೆ ಸೂಚನೆ

ಮಂಗಳೂರು:ಮಂಗಳೂರು ತಾಲೂಕಿನ ಬಜಪೆ ಎಡಪದವಿನ ಮಚ್ಚೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕಾಮಗಾರಿ ನಡೆಯುತ್ತಿದ್ದು, ಪ್ರಸ್ತುತ ಮಂಗಳೂರಿನಿಂದ ಮೂಡಬಿದ್ರೆ ಕಡೆಗೆ ಹಾಗೂ ಮೂಡಬಿದ್ರೆಯಿಂದ ಮಂಗಳೂರು ಕಡೆಗೆ ವಾಹನಗಳ ಓಡಾಟಕ್ಕೆ ಇದ್ದ ಹಳೆ ರಸ್ತೆಯು ಘನ ವಾಹನಗಳ ಓಡಾಟದಿಂದ ಬಿರುಕು ಬಿಟ್ಟು ಅಲ್ಲಲ್ಲಿ ಕುಸಿಯಲು ಪ್ರಾರಂಭಿಸಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಫೆ. 12  ರಿಂದ ಮಾ.13  ರವರೆಗೆ  30 ದಿನಗಳ ಕಾಲ ರಸ್ತೆ ದುರಸ್ಥಿ ಕಾಮಗಾರಿ ನಡೆಯಲಿದೆ. ಮಾರ್ಗದಲ್ಲಿ ಸಂಚರಿಸುವ ವಾಹನಗಳು  ಈ ಕೆಳಗಿನ ಬದಲಿ ರಸ್ತೆಯನ್ನು ಉಪಯೋಗಿಸಬಹುದಾಗಿದೆ ಎಂದು ಮಂಗಳೂರು ಪೊಲೀಸ್ ಕಮೀಷನರ್  ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
 ಮಂಗಳೂರು ಕಡೆಯಿಂದ ಮೂಡಬಿದ್ರೆ ಕಡೆಗೆ ಮತ್ತು ಮೂಡಬಿದ್ರೆ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ವಾಹನಗಳು ತಾತ್ಕಾಲಿಕವಾಗಿ ಈ ಕೆಳಗಿನ ಬದಲಿ ರಸ್ತೆಗಳನ್ನು ಉಪಯೋಗಿಸಬಹುದಾಗಿದೆ.  
ಮೂಡಬಿದ್ರೆ ಕಡೆಯಿಂದ ಮಂಗಳೂರು ಕಡೆಗೆ ಬರುವಂತಹ ಲಾರಿಗಳು ವಿದ್ಯಾಗಿರಿ ಮುಲ್ಕಿ ಕ್ರಾಸ್‌ನಲ್ಲಿ ಬಲಕ್ಕೆ ತಿರುಗಿ ಕಿನ್ನಿಗೋಳಿ ರಸ್ತೆಯಲ್ಲಿ ಸಂಚರಿಸಿ ಪಕ್ಷಿಕೆರೆ ಕ್ರಾಸ್ ನಲ್ಲಿ ಬಲಕ್ಕೆ ತಿರುಗಿ ಮುಲ್ಕಿ ಜಂಕ್ಷನ್ - ಸುರತ್ಕಲ್ ಮೂಲಕ ಮಂಗಳೂರು ಕಡೆಗೆ  ಸಂಚರಿಸುವುದು ಹಾಗೂ ಮಂಗಳೂರು ಕಡೆಯಿಂದ ಮೂಡಬಿದ್ರೆ ಕಡೆಗೆ ಸಂಚರಿಸುವ ಲಾರಿಗಳು ಇದೇ ರಸ್ತೆಯಲ್ಲಿ ಸಂಚರಿಸುವುದು.
ಮೂಡಬಿದ್ರೆ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಇತರ ಎಲ್ಲಾ ಲಘುವಾಹನಗಳು ವಿದ್ಯಾಗಿರಿ ಮುಲ್ಕಿ ಕ್ರಾಸ್‌ನಲ್ಲಿ ಬಲಕ್ಕೆ ತಿರುಗಿ ಕಿನ್ನಿಗೋಳಿ ರಸ್ತೆಯಲ್ಲಿ ಸಂಚರಿಸಿ ಮೂರುಕಾವೇರಿ- ಕಟೀಲು-ಪೆರ್ಮುದೆ-ಬಜಪೆ- ಮೂಲಕ ಅಥವಾ ಪಕ್ಷಿಕೆರೆ ಕ್ರಾಸ್ ನಲ್ಲಿ ಎಡಕ್ಕೆ ತಿರುಗಿ ಹಳೆಯಂಗಡಿ- ಸುರತ್ಕಲ್ ಮೂಲಕ ಮಂಗಳೂರು ಕಡೆಗೆ  ಸಂಚರಿಸುವುದು ಹಾಗೂ ಮಂಗಳೂರು ಕಡೆಯಿಂದ ಮೂಡಬಿದ್ರೆ ಕಡೆಗೆ ಸಂಚರಿಸುವ ಇತರ ಎಲ್ಲಾ ಲಘುವಾಹನಗಳು ಇದೇ ರಸ್ತೆಯಲ್ಲಿ ಸಂಚರಿಸುವುದು.

ಮೂಡಬಿದ್ರೆ ಕಡೆಯಿಂದ ಮಂಗಳೂರು ಕಡೆಗೆ ಬರುವ ಸಾರ್ವಜನಿಕ ರೂಟ್ ಬಸ್ಸುಗಳು ಮತ್ತು ಸ್ಥಳೀಯರ ಲಘು ವಾಹನಗಳು ಮಾತ್ರ ದಡ್ಡಿ ಕಲ್ಪನೆ ದೂಮಚೆಡವು ಕ್ರಾಸ್ ಬಳಿ ಬಲಕ್ಕೆ ತಿರುಗಿ - ಪುಮಾರ್ ಪದವು ಕ್ರಾಸ್ - ಮಂಜನ ಕಟ್ಟೆ ಕ್ರಾಸ್ -  ಅರ್ಜುನಕೋಡಿ -   ಈಶ್ವರಕಟ್ಟೆ ಕ್ರಾಸ್ - ಮುಚ್ಚೂರು ಕ್ರಾಸ್ ಬಳಿ ಬಲಕ್ಕೆ ತಿರುಗಿ ಕೈಕಂಡ ಗುರುಪುರ ಮೂಲಕ ಮಂಗಳೂರು ಕಡೆಗೆ  ಸಂಚರಿಸುವುದು.
ಮಂಗಳೂರು ಕಡೆಯಿಂದ ಗುರುಪುರ-ಕೈಕಂಬ ಮೂಲಕ ಮೂಡಬಿದ್ರೆ ಕಡೆಗೆ ಹೋಗುವ ಸಾರ್ವಜನಿಕ ರೂಟ್ ಬಸ್ಸುಗಳು ಮತ್ತು ಸ್ಥಳೀಯರ ಲಘು ವಾಹನಗಳು ಮಾತ್ರ ಗಂಜಿಮಠದಿಂದ ಮುಂದೆ ಮುಚ್ಚೂರು ಕ್ರಾಸ್ ಬಳಿ ಎಡಕ್ಕೆ ತಿರುಗಿ ಈಶ್ವರಕಟ್ಟೆ ಕ್ರಾಸ್-ಅರ್ಜುನಕೋಡಿ - ಮಂಜನ ಕಟ್ಟೆ ಕ್ರಾಸ್ -ಪುಮಾರ್ ಪದವು ಕ್ರಾಸ್- ದಡ್ಡಿ ಕಲ್ಪನೆ ದೂಮಚೆಡವು ಕ್ರಾಸ್ ಬಳಿ ಎಡಕ್ಕೆ ಸಂಚರಿಸಿ ಮೂಡಬಿದ್ರೆ ಕಡೆಗೆ ಸಂಚರಿಸುವುದು.

 ಮಂಗಳೂರು ಕಡೆಯಿಂದ ಮೂಡಬಿದ್ರೆ ಮೂಲಕ -ಕಾರ್ಕಳ ಕಡೆಗೆ ಸಂಚರಿಸುವ ಎಲ್ಲಾ ಲಾರಿಗಳು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸುರತ್ಕಲ್-ಮುಲ್ಕಿ-ಪಡುಬಿದ್ರೆಯಿಂದಾಗಿ ಕಾರ್ಕಳ ಕಡೆಗೆ ಸಂಚರಿಸುವುದು.
 
ಮಾರ್ಗ ಬದಲಾವಣೆ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾದ್ಯತೆಗಳು ಇರುವುದರಿಂದ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ವಿನಂತಿಸಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ