ಫೆ.21ಮೂಲ್ಕಿಯ ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್‌ನ 17 ನೇ ವಾರ್ಷಿಕೋತ್ಸವ,ಸಾಧಕರಿಗೆ ಸನ್ಮಾನ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Tuesday, February 17, 2026
ಮೂಲ್ಕಿ:ಮೂಲ್ಕಿಯ ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ದೈವಸ್ಥಾನದ ಸೇವಾ ಸಮಿತಿಯ ಸಹ ಸಂಸ್ಥೆ ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್‌ನ 17 ನೇ ವಾರ್ಷಿಕೋತ್ಸವ ಹಾಗೂ ಮಹಾ ಶಿವರಾತ್ರಿಯ ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,ಧಾರ್ಮಿಕ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮವು ಫೆ. 21 ರ ಶನಿವಾರ ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ದೈವಸ್ಥಾನದಲ್ಲಿ ಜರಗಲಿರುವುದು.ಫೆ.21 ರ ಶನಿವಾರ ಬೆಳಿಗ್ಗೆ ಸಾಮೂಹಿಕ ಸತ್ಯನಾರಾಯಣ ಪೂಜೆ,ಮಧ್ಯಾಹ್ನ ಪ್ರಸಾದ ವಿತರಣೆ, ಅನ್ನಸಂತರ್ಪಣೆ,ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ಊರಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ ನಡೆಯಲಿರುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದ್ಯಮಿ ಪ್ರಭಾಕರ್ ಪೂಜಾರಿ ವಹಿಸಲಿದ್ದು ,ಕಾರ್ಯಕ್ರಮವನ್ನು ಮೆಸ್ಕಾಂ ನ ಅಧ್ಯಕ್ಷ ಕೆ. ಹರೀಶ್ ಕುಮಾರ್ ಉದ್ಘಾಟಿಸಲಿದ್ದಾರೆ. ಶ್ರೀ ಕ್ಷೇತ್ರ ಗೆಜ್ಜೆಗಿರಿಯ ತಂತ್ರಿಗಳಾದ ಶಿವಾನಂದ ಶಾಂತಿ ಮೂಡಬಿದ್ರಿ ಆಶೀರ್ವಚನ ನೀಡಲಿದ್ದು, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ,ಉದ್ಯಮಿಗಳಾದ ಪ್ರವೀಣ್ ಕುಮಾರ್ ಬೊಳ್ಳೂರು,ಮೂಲ್ಕಿ ಪ್ರಬೋದ್ ಕುಡ್ವ, ಮಂತ್ರ ಸರ್ಫ್ ಕ್ಲಬ್, ಕೊಳಚಿಕಂಬಳದ ನಟರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತೆ ಸಿಂಧು ಗುಜರನ್ ,ನಡಿಕುದ್ರು ಶ್ರೀ ಜಾರಂದಾಯ ದೈವಸ್ಥಾನದ ಅರ್ಚಕ ನಿರಂಜನ್ ಪೂಜಾರಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತರಾದ ದ್ಯೆವ ನರ್ತಕ ಭಾಸ್ಕರ್ ಬಂಗೇರ ಪಡುಬಿದ್ರಿ ,ಜಯ ಕೃಷ್ಣ ಕೋಟ್ಯಾನ್ ಮತ್ತು ದ್ಯೆವದ ಪರಿಚಾರಕ ಮಾಧವ ಮಡಿವಾಳ, ಚಿತ್ರಾಪುರವರನ್ನು ಸನ್ಮಾನಿಸಲಾಗುವುದು. ಮಹಿಳೆಯರಿಂದ ಮತ್ತು ಮಕ್ಕಳಿಂದ ಸಾಂಸ್ಕ್ರತಿಕ ಕಾರ್ಯಕ್ರಮ, ಲಕುಮಿ ತಂಡದಿಂದ ಆಂಟೀ ಬೊಕ್ಕ ಅಂಕಲ್ ತುಳು ಹಾಸ್ಯಮಯ ನಾಟಕ ಪ್ರದರ್ಶನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.