-->

ಮೂಲ್ಕಿಯ ಯುವ ರಾಜಕೀಯ-ಸಾಮಾಜಿಕ ನೇತಾರ ಅಶೋಕ್ ಪೂಜಾರ್ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿ ಆಯ್ಕೆ

ಮೂಲ್ಕಿಯ ಯುವ ರಾಜಕೀಯ-ಸಾಮಾಜಿಕ ನೇತಾರ ಅಶೋಕ್ ಪೂಜಾರ್ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿ ಆಯ್ಕೆ


ಮಂಗಳೂರು : ಮೂಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ನ ನಿಕಟಪೂರ್ವ ಅಧ್ಯಕ್ಷ ಯುವ ನಾಯಕರಾಗಿರುವ  ಅಶೋಕ್ ಪೂಜಾರ್ ಅವರು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವ ಹಿನ್ನಲೆಯಲ್ಲಿ ಹಾಗೂ ಸಂಘಟನೆಯನ್ನು ರಾಜ್ಯದಾದ್ಯಂತ ಸಕ್ರಿಯಗೊಳಿಸಲು ಅಖಿಲ ಭಾರತ ಯುವ ಕಾಂಗ್ರೆಸ್  ಅಧ್ಯಕ್ಷ  ಉದಯ್ ಭಾನು ಚಿಟ್ ರವರ ನಿರ್ದೇಶನದ ಮೇರೆಗೆ ಹಾಗೂ  ಅಖಿಲ ಭಾರತ ಯುವ  ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿಗಳಾದ  ನಿಗಮ್ ಭಂಡಾರಿಯವರ ಅನುಮೋದನೆಯೊಂದಿಗೆ  ಅಶೋಕ ಪೂಜಾರ, ಅವರನ್ನು ದಕ್ಷಿಣ-ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಉಪಾಧ್ಯಕ್ಷರನ್ನಾಗಿ(ಎಸ್.ಸಿ) ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಆದೇಶಿಸಲಾಗಿದೆ.
ಯುವ ಜನರ ಸಂಘಟನಾ ಚತುರರಾಗಿರುವ ಅಶೋಕ್ ಪೂಜಾರ್ ಅವರು ಮೂಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ನ ನಿಕಟಪೂರ್ವ ಅಧ್ಯಕ್ಷರಾಗಿ, ಮೂಲ್ಕಿ ಪಟ್ಟಣ ಪಂಚಾಯಿತಿಯ ಮಾಜಿ ಸದಸ್ಯರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕರಾವಳಿ ಆದಿಜಾಂಬವ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ, ಸಮಾಜವನ್ನು ಸಂಘಟಿಸುತ್ತಿದ್ದು, ಕಾಂಗ್ರೆಸ್ ಪಕ್ಷದ ಪ್ತಶ್ನಾತೀತ ಯುವ ನಾಯಕರಾಗಿ ದುಡಿಯುತ್ತಿದ್ದಾರೆ. ಸಾಮಾಜಿಕ ಹಾಗೂ ಕ್ರೀಡಾ ಚಟುವಟಿಕೆಯಲ್ಲಿ ವಿಶೇಷವಾಗಿ ತೊಡಗಿಸಿಕೊಂಡಿದ್ದಾರೆ.
ಈ ಬಗ್ಗೆ ಅಶೋಕ್ ಪೂಜಾರ್ ಪ್ರತಿಕ್ರಯಿಸಿ, ತಮಗೆ ನೀಡಿರುವ ಜವಾಬ್ದಾರಿಯನ್ನು ವಹಿಸಿಕೊಂಡು ಪ್ರದೇಶ ಕಾಂಗ್ರೆಸ್ ಸಮಿತಿ ಮಾನ್ಯ ಅಧ್ಯಕ್ಷರು, ಯುವ ಕಾಂಗ್ರೆಸ್ ಉಸ್ತುವಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಹಿರಿಯ ಮುಖಂಡರ ಮಾರ್ಗದರ್ಶನ ಮತ್ತು ಸ್ಥಳೀಯ ನಾಯಕರುಗಳ ಸಹಕಾರದೊಂದಿಗೆ ಯುವ ಕಾಂಗ್ರೆಸ್ ಸಂಘಟನೆಯನ್ನು ಬಲಗೊಳಿಸಲು ಎಲ್ಲ ರೀತಿಯಲ್ಲಿ ಪ್ರಾಮಾಣಿಕನಾಗಿ ದುಡಿಯುತ್ತೇನೆ ಪಕ್ಷವನ್ನು ಕ್ಷೇತ್ರದ ಸಹಿತ ಜಿಲ್ಲೆಯಲ್ಲಿ ಇನ್ನಷ್ಟು ಬಲಗೊಳಿಸುತ್ತೇನೆ ಎಂದರು.



ಮಾಜಿ ಸಚಿವ ಅಭಯಂದ್ರರ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರ ನಿರಂತರ ಮಾರ್ಗದರ್ಶನದಿಂದ ಸ್ಥಾನಮಾನ ಸಿಕ್ಕಿದೆ : ಅಶೋಕ್ ಪೂಜಾರ್


 ಮೂಲ್ಕಿಯ ಯುವ ರಾಜಕೀಯ-ಸಾಮಾಜಿಕ ನೇತಾರ ಅಶೋಕ್ ಪೂಜಾರ್ ಅವರು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಗ್ಗೆ ಮಾಧ್ಯಮದೊಂದಿಗೆ ಹರ್ಷ ವ್ಯಕ್ತಪಡಿಸಿ, ಮಾತನಾಡಿ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಹಾಗೂ ಜಿಲ್ಲೆಯಲ್ಲಿ ಪಕ್ಷಕ್ಕೆ ಹೊಸ ಚೈತನ್ಯ ಮೂಡಿಸಿದ ಸದಾ ನನ್ನ ರಾಜಕೀಯ ಚಟುವಟಿಕೆಗೆ ಬೆನ್ನೆಲುಬಾಗಿ ನಿಂತಿರುವ ರಾಜಕೀಯ ಗುರುಗಳಾದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರೇ ನನಗೆ ಸೂಕ್ತ ಸ್ಥಾನಮಾನ ಸಿಗಲು ಪ್ರಮುಖ ಕಾರಣರಾಗಿದ್ದಾರೆ ಎಂದರು.
ಮೂಲ್ಕಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ನಾಯಕರ ಮಾರ್ಗದರ್ಶನದ ಜೊತೆಗೆ ಯುವ ಸಮುದಾಯದ ಸಹಕಾರದಲ್ಲಿ ಪಕ್ಷವನ್ನು ಬಲಗೊಳಿಸುವ ಅನೇಕ ಯೋಜನೆಗಳಿಗೆ ಚಾಲನೆ ನೀಡಲಾಗುವುದು ಎಂದರು.




ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ