Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಮಾದಕ ದ್ರವ್ಯ ಮಾರಾಟಕ್ಕೆ ಯತ್ನ ,ಆರೋಪಿಯ ಬಂಧನ

ಮೂಲ್ಕಿ:ಎಂ.ಡಿ.ಎಂ.ಎ. ಮಾದಕ ದ್ರವ್ಯವನ್ನು ಮಾರಾಟಕ್ಕೆ ಯತ್ನಿಸಿದ ಆರೋಪಿಯನ್ನು ಮೂಲ್ಕಿ ಪೊಲೀಸರು  ಬಂಧಿಸಿ 1,50,000/- ಮೌಲ್ಯದ  ಸುಮಾರು 15 ಗ್ರಾಂ  ಎಂ.ಡಿ.ಎಂ.ಎ. ಮಾದಕ ದ್ರವ್ಯ ವಶಪಡಿಸಿಕೊಂಡಿದ್ದಾರೆ.


ಬಂಧಿತನನ್ನು ಆರೋಪಿ  ಹಳೆಯಂಗಡಿ ನಿವಾಸಿ ಮೊಹಮ್ಮದ್ ಮುಸಾಹಿದ್(34) ಎಂದು ಗುರುತಿಸಲಾಗಿದೆ.

ಫೆ. 4  ರಂದು ಮುಲ್ಕಿ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ರಾಘವೇಂದ್ರ ನಾಯ್ಕ್ ರವರು ಸಿಬ್ಬಂದಿಗಳೊಂದಿಗೆ ಖಚಿತ ಮಾಹಿತಿ ಮೇರೆಗೆ ಮುಲ್ಕಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಎಂ.ಡಿ.ಎಂ.ಎ. ಮಾದಕ ದ್ರವ್ಯವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿ ಮೊಹಮ್ಮದ್  ಎಂಬಾತನನ್ನು ವಶಕ್ಕೆ ಪಡೆದು ಆತನ ಬಳಿ ಇದ್ದ ಸುಮಾರು 1,50,000/- ರೂ ಮೌಲ್ಯದ ಸುಮಾರು 14.9  ಗ್ರಾಂ  ಎಂ.ಡಿ.ಎಂ.ಎ. ಎಂಬ ಮಾದಕ ವಸ್ತುವನ್ನು ಹಾಗೂ ಕೃತ್ಯಕ್ಕೆ ಬಳಸಿದ ಮೊಬೈಲ್ ಪೋನ್ ಮತ್ತು ಇತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಆರೋಪಿಯು  ಮಾದಕ ವಸ್ತುವನ್ನು ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅಕ್ರಮವಾಗಿ ಪೂರೈಕೆ ಮಾಡಿ ಹಣ ಗಳಿಸುವ ಉದ್ದೇಶದಿಂದ ತಂದಿರುವುದಾಗಿ ತಿಳಿದು ಬಂದಿದ್ದು, ಆರೋಪಿತನ ವಿರುದ್ದ ಮುಲ್ಕಿ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.