ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶ,ಶ್ರೀಕ್ಷೇತ್ರ ಧರ್ಮಸ್ಥಳದಿಂದ 5 ಲ.ರೂ ಚೆಕ್ ಹಸ್ತಾಂತರ
Friday, February 27, 2026
ಹಳೆಯಂಗಡಿ:ಸಸಿಹಿತ್ಲುವಿನ ಶ್ರೀ ಭಗವತೀ ದೇವಸ್ಥಾನದ ಜೀರ್ಣೋದ್ದಾರ ಹಾಗೂ ಮಾ.4 ರಿಂದ ಮಾ.8 ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಕ್ಷೇತ್ರದಿಂದ ಕೂಡ ಮಾಡಿದ 5 ಲಕ್ಷ ರೂಪಾಯಿಯ ಚೆಕ್ ನ್ನು ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶ ಸಮಿತಿಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಅವರು ಹಸ್ತಾಂತರಿಸಿದರು.
ಈ ಸಂದರ್ಭ ಕ್ಷೇತ್ರದ ಪ್ರಧಾನ ಅರ್ಚಕ ಶ್ರೀನಿವಾಸಯಾನೆ ಅಪ್ಪು ಪೂಜಾರಿ, ಕ್ಷೇತ್ರದ ಆಡಳಿತ ಮೊಕ್ತೇಸರ ಚಂದ್ರಶೇಖರ ಬೆಳ್ಳಡ ಗಂಪಮನೆ ಕಟೀಲು, ಅರಸು ವೆಲ್ವೇರ್ ಟ್ರಸ್ಟ್ ನ ಅಧ್ಯಕ್ಷ ಗೌತಮ್ ಜೈನ್, ಯೋಜನಾಧಿಕಾರಿ ಗಿರೀಶ್ ಎಂ,ಮಾತೃಮಂಡಳಿಯ ಅಧ್ಯಕ್ಷೆ ಕಸ್ತೂರಿ ಪಂಜ, ಸಂಚಾಲಕ ಗೀತಾ ಪಿ ಕುಮಾರ್, ವಲಯ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಚೇಳಾಯರು, ವಲಯ ಜನಜಾಗೃತಿ ಅಧ್ಯಕ್ಷ ವಿನೋದ್ ಸಾಲ್ಯಾನ್ ಬೆಳ್ಳಾಯರು, ಹಳೆಯಂಗಡಿ ಗ್ರಾ.ಪಂ ನ ಮಾಜಿ ಅಧ್ಯಕ್ಷೆ ಪೂರ್ಣಿಮಾ, ಮೊಗವೀರ ಮಹಾಸಭಾ ಅಧ್ಯಕ್ಷ ಶೋಭೇಂದ್ರ ಸಸಿಹಿತ್ಲು, ಮೊಗವೀರ ಮಹಿಳಾ ಸಭಾದ ಅಧ್ಯಕ್ಷ ಸವಿತಾ, ವಲಯ ಮೇಲ್ವಿಚಾರಕ ನಿಶ್ಮಿತಾ ಶೆಟ್ಟಿ, ಹಾಗೂ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು