-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಏ.4: ಗುರುಪುರ  ಮೂಳೂರು-ಅಡ್ಡೂರು ಜೋಡುಕರೆ ಕಂಬಳ - ಇನಾಯತ್ ಅಲಿ

ಏ.4: ಗುರುಪುರ ಮೂಳೂರು-ಅಡ್ಡೂರು ಜೋಡುಕರೆ ಕಂಬಳ - ಇನಾಯತ್ ಅಲಿ

ಮಂಗಳೂರು: ಗುರುಪುರದ ಮಾಣಿಬೆಟ್ಟುವಿನಲ್ಲಿ ಏ.4ರ ಶನಿವಾರದಂದು  3ನೇ ವರ್ಷದ ಹೊನಲು ಬೆಳಕಿನ ಮೂಳೂರು-ಅಡ್ಡೂರು ಜೋಡುಕರೆ ಕಂಬಳವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಇನಾಯತ್ ಅಲಿ ಹೇಳಿದರು.ಅವರು ನಗರದ ಖಾಸಗಿ ಹೋಟೆಲ್‌ನಲ್ಲಿ  ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಕಂಬಳ ಅನ್ನುವಂತಹುದು ಕೇವಲ ಒಂದು ಕ್ರೀಡೆಯಲ್ಲ, ಇದು ಈ ನೆಲೆದ ಸಂಸ್ಕೃತಿಯನ್ನು ಉಳಿಸುವ ಕಾರ್ಯವನ್ನು ಮಾಡುತ್ತಿದೆ ಗುರುಪುರ ಕಂಬಳೋತ್ಸವವನ್ನು ಜಾತಿ, ಮತ, ಪಕ್ಷ ಭೇದ ಮರೆತು ಎಲ್ಲರೂ ಒಂದಾಗಿ ಆಚರಿಸುವ ಮೂಲಕ ನಮ್ಮ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಪೂರ್ವಸಿದ್ಧತೆಗಳು ‘ಭರದಿಂದ ನಡೆಯುತ್ತಿದೆ ಎಂದರು.

ಏ. 4ರಂದು ಬೆಳಿಗ್ಗೆ 8.30ಕ್ಕೆ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರು ಕಂಬಳವನ್ನು ಉದ್ಘಾಟಿಸಲಿದ್ದಾರೆ. ಸಂಜೆ 6.30ಕ್ಕೆ ನಡೆಯುವ ಸಭಾ ಕಾರ್ಯಕ್ರಮವನ್ನು ಮಾಜಿ ಸಂಸದ,‌ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಉದ್ಘಾಟಿಸಲಿದ್ದಾರೆ. ವಿಧಾನಸಭಾ ಅಧ್ಯಕ್ಷ  ಯು.ಟಿ. ಖಾದರ್, ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.

 ಈ ಬಾರಿಯ ಕಂಬಳದಲ್ಲಿ ಭಾಗವಹಿಸುವ ಪ್ರತಿಯೊಂದು ಕೋಣಗಳ ಮಾಲೀಕರಿಗೆ ಬೆಳ್ಳಿಯ ನಾಣ್ಯ ಹಾಗೂ 30 ಕೆಜಿ ಹುರುಳಿಯನ್ನು ವಿತರಿಸಲಾಗುವುದು. ಅಲ್ಲದೆ, ಕನೆಹಲಗೆ ವಿಭಾಗದಲ್ಲಿ ನಿಗದಿತ ಎತ್ತರಕ್ಕೆ ನೀರು ಹಾಯಿಸದ ಎಲ್ಲಾ ಕೋಣಗಳಿಗೆ ಚಿನ್ನದ ಪದಕ ನೀಡಿ ಗೌರವಿಸಲಾಗುವುದು ಎಂದರು.

ಕಂಬಳ ಅಕಾಡೆಮಿ ಸಂಚಾಲಕರಾದ ಗುಣಪಾಲ ಕಡಂಬ ಮಾತನಾಡಿ ಕಂಬಳದ ಘನತೆಯನ್ನು ಉಳಿಸುವಲ್ಲಿ ಸ್ವಯಂ ಶಿಸ್ತು ಅತ್ಯಗತ್ಯವಾಗಿದೆ.ಒಗ್ಗಟಿನಿಂದ ಕೆಲಸಮಾಡುವ ಮೂಲಕ ಕ್ರೀಡೆಯನ್ನು ಯಶಸ್ವಿಗೋಳಿಸೋಣ ಎಂದರು.

 ರಾಜ್ಯ ಕಂಬಳ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಲೋಕೇಶ್ ಶೆಟ್ಟಿ ಮುಚ್ಚೂರು ಮಾತನಾಡಿ ಈ ಬಾರಿಯ ಕಂಬಳದಲ್ಲಿ ಶಿಸ್ತಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು.ತಂಡದಿಂದ ಸೆನ್ಸಾರ್ ತಂತ್ರಜ್ಞಾನವನ್ನು ಆಳವಡಿಸಲಾಗುತ್ತಿದೆ ಎಂದರು.


ಈ ಸಂದರ್ಭ ಕಂಬಳದ ಆಮಂತ್ರಣ ಪತ್ರಿಕೆಯನ್ನು  ಬಿಡುಗಡೆಗೊಳಿಸಲಾಯಿತು.

ಪತ್ರಿಕಾ ಗೋಷ್ಠಿಯಲ್ಲಿ  ಕಂಬಳ ಸಮಿತಿ ಗೌರವಾಧ್ಯಕ್ಷ ಪದ್ಮನಾಭ ಕೋಟ್ಯಾನ್, ಕಾರ್ಯಾಧ್ಯಕ್ಷ ಜಗದೀಶ್ ಶೆಟ್ಟಿ ಮಾಣಿಬೆಟ್ಟುಗುತ್ತು, ಪ್ರಧಾನ ಕಾರ್ಯದರ್ಶಿ ಯಶವಂತ್ ಕುಮಾರ್ ಶೆಟ್ಟಿ ಬೆಳ್ಳೂರುಗುತ್ತು, ವ್ಯವಸ್ಥಾಪಕ ವಿನಯ ಕುಮಾರ್ ಶೆಟ್ಟಿ ಮಾಣಿಬೆಟ್ಟುಗುತ್ತು, ಕೆಪಿಸಿಸಿ ಸದಸ್ಯ, ಸಮಿತಿ ಉಪಾಧ್ಯಕ್ಷ ಆರ್.ಕೆ. ಪೃಥ್ವಿರಾಜ್, ಮಾಜಿ ಉಪಮೇಯರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಗಿರೀಶ್ ಆಳ್ವ, ಭಾಷ ಗುರುಪುರ, ಜಿ. ಮೊಹಮ್ಮದ್, ಪದ್ಮನಾಭ ಶೆಟ್ಟಿ, ಹರೀಶ್ ಭಂಡಾರಿ ಹಾಗೂ ಉಪಸ್ಥಿತರಿದ್ದರು.

ಮುಂದಿನ ದಸರಾದಲ್ಲಿ ಕಂಬಳೋತ್ಸವ


2025ರ ಗುರುಪುರ ಕಂಬಳದಲ್ಲಿ ಭಾಗವಹಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರಾವಳಿಯ ಜಾನಪದ ಕ್ರೀಡೆಗೆ ಮನಸೋತು, ಮೈಸೂರು ದಸರಾದಲ್ಲೂ ಕಂಬಳ ಆರಂಭಿಸುವ ಭರವಸೆ ನೀಡಿದ್ದರು. ತಾಂತ್ರಿಕ ಕಾರಣಗಳಿಂದ ಕಳೆದ ಬಾರಿ ಇದು ಸಾಧ್ಯವಾಗದಿದ್ದರೂ, ಮುಂದಿನ ದಸರಾ ಉತ್ಸವದಲ್ಲಿ ಕಂಬಳಕ್ಕೆ ಅವಕಾಶ ಕಲ್ಪಿಸುವ ಭವಸೆಯನ್ನು ಅವರು ನೀಡಿದ್ದಾರೆ ಎಂದು ಇನಾಯತ್ ಅಲಿ ಹೇಳಿದರು.

ಕಂಬಳೋತ್ಸವದಲ್ಲಿ ಯಕ್ಷಗಾನ ಸಾಧಕರಿಗೆ ಸನ್ಮಾನ, ಫುಡ್ ಫೆಸ್ಟಿವಲ್, ಕೇರಳದ ಪ್ರಸಿದ್ಧ ಚೆಂಡೆವಾದನ ಮತ್ತು ಆಕರ್ಷಕ ಸುಡುಮದ್ದು ಪ್ರದರ್ಶನ ಕಂಬಳದ ಮೆರುಗು ಹೆಚ್ಚಿಸಲಿವೆ ಎಂದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ,ಕಾರ್ಯಕ್ರಮಗಳ ನೇರಪ್ರಸಾರ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630

ಸುದ್ದಿಗಳಿದ್ದರೆ Chigurunewss@gmail.com ಗೆ ಕಳಿಸಿರಿ