ಆದ್ಯಪಾಡಿಯ ಬೀಬಿಲಚ್ಚಿಲ್ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಮೋನಪ್ಪ ಮೇಸ್ತ್ರಿ ನಿಧನ
ಬಜಪೆ: ಆದ್ಯಪಾಡಿಯ ಬೀಬಿಲಚ್ಚಿಲ್ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಮೋನಪ್ಪ ಮೇಸ್ತ್ರಿ (70) ಅವರು ಭಾನುವಾರ ನಿಧನರಾದರು.
ದೇವಸ್ಥಾನದ ಪುನರ್ ನಿರ್ಮಾಣ , ಬ್ರಹ್ಮಕಲಶ ಮತ್ತು ಅಷ್ಟಪವಿತ್ರ ನಾಗಬ್ರಹ್ಮ ಮಂಡಲವು ಮೋನಪ್ಪ ಮೇಸ್ತ್ರೀಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆದಿತ್ತು
ಅವರು ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಅವರ ನಿಧನಕ್ಕೆ ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಸಹಿತ ಹಲವು ಗಣ್ಯಾತೀಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.