ಕರ್ನಾಟಕ ಮಾದಿಗ ಮಹಾಸಭಾದ ರಾಜ್ಯ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿ ಅಶೋಕ್ ಪೂಜಾರ್ ಆಯ್ಕೆ
Thursday, March 5, 2026
ಮಂಗಳೂರು : ಕರ್ನಾಟಕ ಮಾದಿಗ ಮಹಾಸಭಾದ ರಾಜ್ಯ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿ ಮೂಲ್ಕಿಯ ಯುವ ಸಾಮಾಜಿಕ ನೇತಾರ ಅಶೋಕ್ ಎಚ್. ಪೂಜಾರ್ ಆಯ್ಕೆಯಾಗಿದ್ದಾರೆ.
ಕರ್ನಾಟಕ ಮಾದರ ಮಹಾಸಭಾದ ರಾಜ್ಯಾಧ್ಯಕ್ಷ ಡಾ. ಕೆ.ಹೆಚ್. ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದೆ.
ಕರ್ನಾಟಕ ಮಾದರ ಮಹಾಸಭೆಯು 2015ರಲ್ಲಿ ಮಾದಿಗ ಸಮುದಾಯದ ಸಬಲೀಕರಣ ಮತ್ತು ಸರ್ವಾಂಗೀಣ ಅಭಿವೃದ್ಧಿ ಉದ್ದೇಶದಿಂದ ಸ್ಥಾಪಿತವಾಗಿದೆ. ಮಾದಿಗ ಸಮುದಾಯದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಗೆ ನಿಷ್ಠೆಯಿಂದ ಹಾಗೂ ತ್ಯಾಗಮನೋಭಾವದಿಂದ ಕೆಲಸ ಮಾಡುವ ಇಂಗಿತವನ್ನು ಅಶೋಕ್ ಪೂಜಾರ್ ಹೊಂದಿದ್ದಾರೆ.
ದಕ್ಷಿಣ ಕನ್ನಡ,ಉಡುಪಿ ಜಿಲ್ಲೆಯ ಕರಾವಳಿ ಆದಿಜಾಂಬವ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿಯೂ ಅಶೋಕ್ ಪೂಜಾರ್ ಸಮುದಾಯವನ್ನು ಸಂಘಟಿಸುತ್ತಿದ್ದಾರೆ.