-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಯಕ್ಷಧ್ರುವ ಯಕ್ಷಶಿಕ್ಷಣ,ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆ,ಯಕ್ಷ ಶಿಕ್ಷಣ  ಫೌಂಡೇಶನ್ ನ ಅಭಿವೃದ್ದಾತ್ಮಕ ಯೋಜನೆ : ಪಟ್ಲ ಸತೀಶ್ ಶೆಟ್ಟಿ

ಯಕ್ಷಧ್ರುವ ಯಕ್ಷಶಿಕ್ಷಣ,ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆ,ಯಕ್ಷ ಶಿಕ್ಷಣ ಫೌಂಡೇಶನ್ ನ ಅಭಿವೃದ್ದಾತ್ಮಕ ಯೋಜನೆ : ಪಟ್ಲ ಸತೀಶ್ ಶೆಟ್ಟಿ



ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್( ರಿ.) ಮಂಗಳೂರು ಇದರ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯಡಿ ಕರ್ತವ್ಯ ನಿರತ ಯಕ್ಷಗಾನ ಶಿಕ್ಷಕರ‌ ಸಮಾಲೋಚನಾ‌ ಸಭೆಯು ಬಲ್ಲಾಲ್ ಭಾಗ್ ಬಳಿ ಇರುವ ಪತ್ತುಮುಡಿ ಸಭಾಂಗಣದಲ್ಲಿ  ನಡೆಯಿತು. 
ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ನಿರ್ದೇಶಕ  ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರು  ಸಭೆಯನ್ನುದ್ದೇಶಿಸಿ ಮಾತನಾಡಿ ಯಕ್ಷಧ್ರುವ ಯಕ್ಷಶಿಕ್ಷಣವು ಪಟ್ಲ ಫೌಂಡೇಶನ್ ನ ಅಭಿವೃದ್ಧಾತ್ಮಕವಾದ ಯೋಜನೆಯಾಗಿದ್ದು ಭವಿತವ್ಯದ ಸುಸಂಸ್ಕೃತ ಪ್ರೇಕ್ಷಕರು ಮತ್ತು ಉತ್ತಮ ಕಲಾವಿದರನ್ನು ತಯಾರುಗೊಳಿಸುವ ನಿಭಾವಣೆಯನ್ನು ಹೊತ್ತ ಯೋಜನೆಯಾಗಿದೆ. ಆ ನಿಟ್ಟಿನಲ್ಲಿ ಎಲ್ಲ ಯಕ್ಷಗಾನ ಶಿಕ್ಷಕರು ಕರ್ತವ್ಯವನ್ನು ನಿರ್ವಹಿಸುವಲ್ಲಿ ಸಫಲತೆಯನ್ನು ಸಾಧಿಸಬೇಕು ಎಂದರು.
ಈ‌ ಸಂದರ್ಭದಲ್ಲಿ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಪ್ರಧಾನ ಸಂಚಾಲಕ  ಪಣಂಬೂರು ವಾಸುದೇವ ಐತಾಳರು ಕಳೆದ ಶೈಕ್ಷಣಿಕ ವರ್ಷದ ತರಗತಿಯ ಅವಲೋಕನ ಮಾಡಿದರು. ಈ ವೇಳೆ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ನೀತಿಸಂಹಿತೆಯನ್ನು ಪ್ರಸ್ತಾಪಿಸಿ ಚರ್ಚಿಸಲಾಯಿತು.
ಪ್ರಸಕ್ತ ಸಭೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ತರಗತಿ, ಯಕ್ಷಗಾನ ಶಿಕ್ಷಕರ ಕಾರ್ಯಗಾರ, ಶಾಲಾ ಸಮಿತಿಯ ಸಭೆ ಸಹಿತ ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಕೇಂದ್ರೀಯ ಸಮಿತಿಯ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ CA ಸುದೇಶ್ ರೈ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಆಳ್ವ ಸಹಿತ ವಿವಿಧ ಪದಾಧಿಕಾರಿಗಳು, ಯಕ್ಷಗಾನ ಶಿಕ್ಷಕರು ಉಪಸ್ಥಿತರಿದ್ದರು. ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಸಂಯೋಜಕ ದೀವಿತ್ ಎಸ್ ಕೆ ಪೆರಾಡಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ