ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳೊಂದಿಗೆ ಡಾ. ವೈ ಭರತ್ ಶೆಟ್ಟಿಯವರಿಂದ ಸರಣಿ ಸಭೆ
Saturday, March 7, 2026
ಮಂಗಳೂರು : ಮುಂಬರುವ ಬೇಸಿಗೆಯನ್ನು ಪರಿಣಾಮಕಾರಿಯಾಗಿ ಎದುರಿಸುವ ನಿಟ್ಟಿನಲ್ಲಿ ಮಂಗಳೂರು ಮಹಾ ನಗರ ಪಾಲಿಕೆಗೆ ಒಳಪಟ್ಟ ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ 22 ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರ ಹಾಗೂ ಮುಂಜಾಗ್ರತ ಕ್ರಮಗಳ ಕುರಿತು ಶಾಸಕ ಡಾ. ವೈ ಭರತ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ, ವಿವಿಧ ಮಟ್ಟದ ಅಧಿಕಾರಿಗಳ ಹಾಗೂ ನಿಕಟಪೂರ್ವ ಪಾಲಿಕೆ ಸದಸ್ಯರ ಉಪಸ್ಥಿತಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ಶಾಸಕರ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು.