ಬ್ರಹ್ಮಕಲಶೋತ್ಸವ ಯಶಸ್ಸಿಗೆ ಎಲ್ಲಾರ ಸಹಕಾರ ಅಗತ್ಯ - ಚಿತ್ತರಂಜನ್ ಶೆಟ್ಟಿ ಕಳವಾರುಗುತ್ತು
ಬಜಪೆ:ಬ್ರಹ್ಮಕಲಶೋತ್ಸವ ಯಶಸ್ಸಿಗೆ ಎಲ್ಲಾರ ಸಹಕಾರ ಅಗತ್ಯ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಚಿತ್ತರಂಜನ್ ಶೆಟ್ಟಿ ಕಳವಾರುಗುತ್ತು ಹೇಳಿದರು. ಅವರು ಕಳವಾರು ಶ್ರೀಬೆಂಕಿನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿಮಾತನಾಡಿದರು. ಕ್ಷೇತ್ರಕ್ಕೆ ಬರುವ ಭಕ್ತರಿಗೆ ಸರಿಯಾದ ವ್ಯವಸ್ಥೆ ಕಲ್ಪಿಸಬೇಕು .ಯಾವುದೇ ವ್ಯವಸ್ಥೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು, ಎಲ್ಲ ಸಮಿತಿ ಸದಸ್ಯರ ಮತ್ತು ಭಕ್ತರ ಸಹಕಾರದಿಂದ ಇಷ್ಟೆಲ್ಲ ಕೆಲಸ ಕಾರ್ಯ ಸಾದ್ಯವಾಯಿತು ಎಂದರು.
ಈ ಸಂದರ್ಭ ಎಂ.ಆರ್.ಪಿ.ಎಲ್ ನೌಕರರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಶರತ್ ಜೋಗಿ 1183000 ಹಣವನ್ನು ಬ್ರಹ್ಮಕಲಶೋತ್ಸವ ಸಮಿತಿಗೆ ಹಸ್ತಾಂತರಿಸಿದರು. ಸಭೆಯಲ್ಲಿ ವಿವಿಧ ಸಮಿತಿಗಳ ಸಂಚಾಲಕರು ಬ್ರಹ್ಮಕಲಶೋತ್ಸವದ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಪ್ರದಾನ ಅರ್ಚಕ ಸುರೇಶ್ ಆಚಾರ್, ಪ್ರಧಾನ ಕಾರ್ಯದರ್ಶಿ ಬಿ. ರವೀಂದ್ರ ರಾವ್, ಕಾರ್ಯದರ್ಶಿ ರಾಮಚಂದ್ರ ಶೆಟ್ಟಿ , ಕೋಶಾಧಿಕಾರಿ ಲಕ್ಷೀಶರಾವ್ ಉಪಸ್ಥಿತರಿದ್ದರು.