-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಕಟೀಲು ಪದವಿ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

ಕಟೀಲು ಪದವಿ ಕಾಲೇಜಿನ ವಾರ್ಷಿಕ ಕ್ರೀಡಾಕೂಟ


ಕಟೀಲು : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ನಡೆಯಿತು. ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀಮತಿ ವೃಂದಾ ಶಶಿಧರ ಹೆಗ್ಡೆ ಉದ್ಘಾಟಿಸಿ, ಕ್ರೀಡಾಕೂಟದ ಪುರುಷ ಮತ್ತು ಮಹಿಳಾ ಚಾಂಪಿಯನ್‌ಗಳಿಗೆ ನಗದು ಬಹುಮಾನಗಳನ್ನು ಘೋಷಿಸಿದರು.
ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ, ಅಂತಿಮ ಬಿ.ಕಾಂ. ವಿದ್ಯಾರ್ಥಿನಿ ಶ್ರೇಯಾ ಅವರಿಗೆ ಯೋಗದಲ್ಲಿ ರಾಷ್ಟ್ರೀಯ ಮಟ್ಟದ ಸಾಧನೆಗಾಗಿ ಹಾಗೂ ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ ಶಮಿತಾ ಅವರಿಗೆ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ರಾಷ್ಟ್ರೀಯ ಮಟ್ಟದ ಸಾಧನೆಗಾಗಿ ನಗದು ಬಹುಮಾನಗಳನ್ನು ಪ್ರದಾನ ಮಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ವಿಜಯ್ ವಿ., ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಅಶ್ವತ್, ಕ್ರೀಡಾ ಕಾರ್ಯದರ್ಶಿ ಸುರಜ್, ಜತೆ ಕಾರ್ಯದರ್ಶಿ ಶ್ರೇಯಾ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಾರ್ತಿಕ್ ನಾಯಕ್, ಉಪಾಧ್ಯಕ್ಷ ತರುಣ್ ಡಿ. ದೇವಾಡಿಗ ಮತ್ತು ಜತೆ ಕಾರ್ಯದರ್ಶಿ ಪ್ರಾರ್ಥನಾ ವೇದಿಕೆಯಲ್ಲಿದ್ದರು.
ಶ್ರಾವ್ಯ ಮಲ್ಯಾ ಸ್ವಾಗತಿಸಿದರು. ಪ್ರೀತಿ ವಂದಿಸಿದರು. ಕೃಪಾ ಟಿ. ಶೆಟ್ಟಿ ನಿರೂಪಿಸಿದರು.


ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ