Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಜನ್ಮದಿನ,ಶಾಸಕ ಡಾ. ವೈ ಭರತ್ ಶೆಟ್ಟಿಯವರಿಂದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

ಮಂಗಳೂರು:ನವ ಮಂಗಳೂರು ಬಂದರು ಪ್ರಾಧಿಕಾರದ ಜೊತೆಗೂಡಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಜನ್ಮದಿನದಂದು  ಶಾಸಕ ಡಾ. ವೈ ಭರತ್ ಶೆಟ್ಟಿಯವರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಅದೇ ರೀತಿ ಈ ವೇಳೆ ಪ್ರಕೃತಿ ಸಂರಕ್ಷಣೆಯ ಸಂಕಲ್ಪದೊಂದಿಗೆ ಗಿಡ ನೆಡುವ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭ, ನವ ಮಂಗಳೂರು ಬಂದರು ಪ್ರಾಧಿಕಾರದ ಅಧಿಕಾರಿಗಳು, ಮಂಗಳೂರು ಉತ್ತರ ಮಂಡಲ ಬಿಜೆಪಿಯ ಅಧ್ಯಕ್ಷರಾದ ಶ್ರೀ ರಾಜೇಶ್ ಕೊಟ್ಟಾರಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಂದೀಪ್ ಕೋಟ್ಯಾನ್, ರಣದೀಪ್ ಕಾಂಚನ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಸುನಿಲ್ ಕುಲಾಯಿ, ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ನಿಕಟಪೂರ್ವ ಕಾರ್ಪೊರೇಟರ್ ಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.