Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ವಾಹನಗಳ ಸಂಚಾರಕ್ಕೆ ಅಡ್ಡಿ - ಬಜಪೆ ಪೋಲಿಸರಿಂದ ದೂರು ದಾಖಲು

ಕೈಕಂಬ :ಮಂಗಳೂರು - ಮೂಡಬಿದಿರೆ ರಾಷ್ಟ್ರೀಯ ಹೆದ್ದಾರಿ 169 ರ ಗಂಜಿಮಠದ ಮುಚ್ಚೂರು ಕ್ರಾಸ್ ಬಳಿ ವಾಹನಗಳ ಸಂಚಾರಕ್ಕೆ ಅಡ್ಡಿಯಾದ ಘಟನೆ ನಡೆದಿದೆ.ಇಲ್ಲಿನ ಕ್ರಾಸ್ ಬಳಿ  ಎರಡು ಮದುವೆ ಹಾಲ್ ಗಳಿದ್ದು,ಮದುವೆ ಕಾರ್ಯಕ್ರಮಕ್ಕೆ ಬಂದವರು ತಮ್ಮ ವಾಹನಗಳನ್ನು ಹೆದ್ದಾರಿ ಬದಿಯಲ್ಲಿಯೇ ನಿಲ್ಲಿಸಿದ್ದರು.ಇದರಿಂದ ಮೂಡಬಿದಿರೆ ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು.ಹೆದ್ದಾರಿ ಯಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಹಾಲ್ ಗಳ ಮಾಲೀಕರು ಹಾಗೂ ಆಯೋಜಕರ ವಿರುದ್ದ ಬಜಪೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.