ಕಟೀಲು ಕನ್ನಡ ಮಾಧ್ಯಮ ಪ್ರೌಢಶಾಲೆ 99 ಶೇ. ಫಲಿತಾಂಶ
ಕಟೀಲು : ಶ್ರೀ ದುರ್ಗಾಪರಮೇಶ್ವರೀ ದೇವಳ ಕನ್ನಡ ಮಾಧ್ಯಮ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ 99 ಫಲಿತಾಂಶ ದಾಖಲಿಸಿದೆ.
98 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 97 ಮಂದಿ ಉತ್ತೀರ್ಣರಾಗಿದ್ದಾರೆ. 23 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 55 ಮಂದಿ ಪ್ರಥಮ, 11 ದ್ವಿತೀಯ ಹಾಗೂ 9 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಶ್ರೇಯ ಶ್ಯಾಮರಾಯ ಆಚಾರ್ಯ(608), ಬಿ. ಎಂ. ಕೀರ್ತನ್ ಆಚಾರ್ಯ(601 ), ಗ್ರೇಸನ್ ಸಿಕ್ವೇರಾ(595) ಶಾಲೆಯಲ್ಲಿ ಮೊದಲ ಮೂರು ಸ್ಥಾನದಲ್ಲಿ ಉತ್ತೀರ್ಣರಾಗಿದ್ದಾರೆ.