ಕಾಜಿಲ ಶ್ರೀ ಕೋರ್ದಬ್ಬು ದೈವಸ್ಥಾನದ ಬ್ರಹ್ಮಕಲಶಾಭಿಷೇಕದ ಪೂರ್ವಭಾವಿ ಸಭೆ
ಕೈಕಂಬ:ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ ಯವರ ಅಧ್ಯಕ್ಷತೆಯಲ್ಲಿ, ಶ್ರೀ ಕೋರ್ದಬ್ಬು ದೈವಸ್ಥಾನ, ಕಾಜಿಲ, ತೆಂಕುಳಿಪಾಡಿ ಗ್ರಾಮದಲ್ಲಿ ನಡೆಯಲಿರುವ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆ ಸಭೆಯು ನಡೆಯಿತು.
ದಿನಾಂಕ 19-04-2026 ರಿಂದ 25-04-2026ರವರೆಗೆ ನಡೆಯಲಿರುವ ಈ ಧಾರ್ಮಿಕ ಮಹೋತ್ಸವವನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದು, ತಮ್ಮ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸಿದ್ಧತೆಗಳನ್ನು ವ್ಯಕ್ತಪಡಿಸಿದರು.