Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಭೀಕರ ಅಪಘಾತ ಓರ್ವ ಸಾವು,ಮೂವರಿಗೆ ಗಂಭೀರ ಗಾಯ

ಸುರತ್ಕಲ್‌:  ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ  ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತಡಂಬೈಲ್  ಸುಪ್ರೀಮ್ ಹಾಲ್ ಮುಂಭಾಗದಲ್ಲಿ ಸಂಭವಿಸಿದೆ.

ಮೃತಪಟ್ಟವರನ್ನು ಚೊಕ್ಕಬೆಟ್ಟು 8ನೇ ಬ್ಲಾಕ್ ನಿವಾಸಿ ಮುಹಮ್ಮದ್ ಅಗ್ತಿ‌ರ್ ಹುಸೈನ್ (25)ಎಂದು ಗುರುತಿಸಲಾಗಿದೆ. ಸುರತ್ಕಲ್ ಚೊಕ್ಕಬೆಟ್ಟು 8ನೇ ಬ್ಲಾಕ್ ನಿವಾಸಿ ಹಾಫಿಲ್ (22), ಮುಂಚೂರು ನಿವಾಸಿಗಳಾದ ರಾಘವೇಂದ್ರ(24) ಯಶವಂತ (26) ಗಂಭೀರವಾಗಿ ಗಾಯಗೊಂಡವರು. ಗಾಯಗೊಂಡವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.