Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

20 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರಕ್ಕೆ ಶಾಸಕ ಡಾ.ಭರತ್ ಶೆಟ್ಟಿಯವರಿಂದ ಶಿಲಾನ್ಯಾಸ

ಮಂಗಳೂರು:2025 - 26 ಸಾಲಿನ ನಗರ ಯೋಜನೆಯಲ್ಲಿ ಬಿಡುಗಡೆಗೊಂಡ 20 ಲಕ್ಷ ರೂಪಾಯಿ ಅನುದಾನದಲ್ಲಿ, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾವೂರು 15 ವಾರ್ಡ್ ನಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಅಂಗನವಾಡಿಗೆ  ಶಾಸಕ ಡಾ. ವೈ ಭರತ್ ಶೆಟ್ಟಿಯವರು ಶಿಲಾನ್ಯಾಸವನ್ನು ನೆರವೇರಿಸಿದರು.

ಈ ಶುಭ ಸಂದರ್ಭದಲ್ಲಿ, ಯೋಜನೆ ಅಧಿಕಾರಿ ಶ್ರೀಮತಿ ಶ್ವೇತಾ ಎನ್, ಮೇಲ್ವಿಚಾರಕಿ ಅನುಪಮಾ ಕೆ ಎಸ್, ನಿಕಟಪೂರ್ವ ಕಾರ್ಪೊರೇಟರ್ ಸುಮಂಗಲ ರಾವ್, ಅಂಗನವಾಡಿ ಕಾರ್ಯಕರ್ತೆ ಪೂಜಾ, ಶಾಲಾ ಮುಖ್ಯೋಪಾಧ್ಯಾಯರಾದ ಜಯಂತಿ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸಿತೇಶ್ ಕೊಂಡೆ , ವಾರ್ಡ್ ಅಧ್ಯಕ್ಷ ಅಜಿತ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.