Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

Kateelಕಟೀಲು ಕಾಲೇಜಿನ ಇಂಚರಕ್ಕೆ ಬಹುಮಾನ


ಕಟೀಲು :2024 -25 ನೇ ಶೈಕ್ಷಣಿಕ ವರ್ಷದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ನಡೆಸಿದ ಅಂತರ್ ಕಾಲೇಜು ಮಟ್ಟದ ಕೆಟಗರಿ 2 ಕಾಲೇಜು ವಾರ್ಷಿಕ ಪತ್ರಿಕೆಯ ಸ್ಪರ್ಧೆಯಲ್ಲಿ ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜು ಪ್ರಥಮ ಸ್ಥಾನವನ್ನು ಪಡೆದಿರುತ್ತದೆ.  ಮಂಗಳೂರು ವಿಶ್ವವಿದ್ಯಾನಿಲಯರಾಣಿ ಅಬ್ಬಕ್ಕ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿಜಯ್ ವಿ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಪಿ.ಎಲ್.ಧರ್ಮ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.