Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ದಕ್ಷಿಣ ಕನ್ನಡ ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ " ಜಿಲ್ಲಾ ಕಾರ್ಯಾಧ್ಯಕ್ಷ " ರನ್ನಾಗಿ ಇಕ್ಬಾಲ್ ಅಹ್ಮದ್ ಮುಲ್ಕಿ ನೇಮಕ



ಮುಲ್ಕಿ:ದಕ್ಷಿಣ ಕನ್ನಡ ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ " ಜಿಲ್ಲಾ ಕಾರ್ಯಾಧ್ಯಕ್ಷ " ರನ್ನಾಗಿ ಇಕ್ಬಾಲ್ ಅಹ್ಮದ್ ಮುಲ್ಕಿ ರವರನ್ನು ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ರವರು ನೇಮಕಗೊಳಿಸಿದ್ದಾರೆ
ಅವರು ಮಾಧ್ಯಮ ಪ್ರಕಟಣೆಯಲ್ಲಿ ಮಾತನಾಡಿ ಇಕ್ಬಾಲ್ ಮುಲ್ಕಿ ರವರು ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು, ಪಕ್ಷದ ತತ್ವ ಹಾಗೂ ಸಿದ್ದಾಂತಗಳಿಗೆ ಬದ್ದರಾಗಿ, ಪಕ್ಷದ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ. ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ವಿನಂತಿಸಿದ್ದಾರೆ