Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ತೋಕೂರು ಶ್ರೀ ಸುಬ್ರಹ್ಮಣ್ಯ ದೇವರ ಪ್ರತಿಷ್ಠಾಪನಾ ಮಹೋತ್ಸವ ವರ್ಷಾಚರಣೆ


ಹಳೆಯಂಗಡಿ : ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಪ್ರತಿಷ್ಠಾಪನಾ ಮಹೋತ್ಸವದ ವರ್ಷಾಚರಣೆ ಮೇ 12 ರಂದು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಶಿಬರೂರು ಗೋಪಾಲಕೃಷ್ಣ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.. ಮೇ 12 ರ ಬೆಳಿಗ್ಗೆ 6ಕ್ಕೆ ದೇವರಿಗೆ ಪಂಚಾಮೃತ ಅಭಿಷೇಕ, ಬೆಳಿಗ್ಗೆ 10.05ಕ್ಕೆ ಮಿಥುನ ಲಗ್ನದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ನವಚತ್ವಾರಿಂಷತ್ ಕಲಶಾಭಿಷೇಕ, ಪ್ರಸನ್ನ ಪೂಜೆ,ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಂಜೆ 6 ಕ್ಕೆ ದೊಡ್ಡರಂಗಪೂಜೆ, ರಾತ್ರಿ 7 ಕ್ಕೆ ಬಲಿ ಮಹೋತ್ಸವ ನಡೆಯಿತು