ಶ್ರೀ ನರೇಂದ್ರ ಮೋದಿಯವರ 12 ವರ್ಷಗಳ ಯಶಸ್ವಿ ಸೇವೆ , ಕಾವೂರು ಶ್ರೀ ಕ್ಷೇತ್ರದಲ್ಲಿ ಮಂಗಳೂರು ಉತ್ತರ ಮಂಡಲ ಬಿಜೆಪಿ ವತಿಯಿಂದ ವಿಶೇಷ ರಂಗಪೂಜೆ
ಮಂಗಳೂರು : ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ 12 ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಮಂಗಳೂರು ಉತ್ತರದ ವತಿಯಿಂದ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ರಂಗಪೂಜೆ ಕಾರ್ಯಕ್ರಮವನ್ನು ಆಯೋಜನೆಗೊಂಡಿತು.
ಈ ಶುಭ ಕಾರ್ಯದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿ, ಶ್ರೀ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ದೇಶವು ಇನ್ನಷ್ಟು ಅಭಿವೃದ್ಧಿ ಕಾಣಲಿ ಎಂದು ಪ್ರಾರ್ಥಿಸಿ, ಅವರ ಮುಂದಿನ ಸೇವಾ ಪಯಣವು ಯಶಸ್ವಿಯಾಗಲೆಂದು ಹಾರೈಸಲಾಯಿತು.