Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ನಿಡ್ಡೋಡಿ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಕಟೀಲು:ನಿಡ್ಡೋಡಿಯ ಜ್ಞಾನರತ್ನ ಎಜುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ ಸಂಸ್ಥೆಯ ಅಂಗಸಂಸ್ಥೆಯಾದ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಸ್ಥಾಪಕಾಧ್ಯಕ್ಷ  ಭಾಸ್ಕರ ದೇವಸ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 
 ಪತಂಜಲಿ ಸಂಸ್ಥೆಯ ಯೋಗ ಗುರು  ಗಂಗಾಧರ ಬಜ್ಪೆ  ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ಮನವರಿಕೆ ಮಾಡಿಕೊಟ್ಟರು. 
 ಆಡಳಿತಾಧಿಕಾರಿ ಸಾಗರ್, ಪ್ರಾಂಶುಪಾಲ  ಶ್ರೀಮತಿ ಅನುರಾಧ ಸಾಲಿಯನ್,ಮುಖ್ಯೋಪಾಧ್ಯಾಯನಿ ಶ್ರೀಮತಿ ಸೀಮಾ, ಸಹ ಮುಖ್ಯ ಶಿಕ್ಷಕಿ ಕುಮಾರಿ ಜಯಶ್ರೀ ಉಪಸ್ಥಿತರಿದ್ದರು. ಶ್ರೀಮತಿ ಸುಮನಾ  ನಿರೂಪಿಸಿದರು.