Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಶಾಲೆಯ 2026–27ನೇ ಸಾಲಿನ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾಗಿ ಶ್ರೀಮತಿ ಹೇಮಲತಾ ದೇವಾಡಿಗ ಆಯ್ಕೆ

ಕಿನ್ನಿಗೋಳಿ:  ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಶಾಲೆಯ  2026–27ನೇ ಸಾಲಿನ ಶಿಕ್ಷಕರಕ್ಷಕ ಸಂಘದ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಸಂಘದ ಅಧ್ಯಕ್ಷರಾಗಿ ಶ್ರೀಮತಿ ಹೇಮಲತಾ ದೇವಾಡಿಗ, ಉಪಾಧ್ಯಕ್ಷರಾಗಿ  ಮಹಮ್ಮದ್ ಆಲಿ, ಕಾರ್ಯದರ್ಶಿಯಾಗಿ ಶಾಲೆಯ ಪ್ರಾಂಶುಪಾಲ ಜಿತೇಂದ್ರ ವಿ. ರಾವ್ ಹೆಜಮಾಡಿ, ಹಾಗೂ ಜೊತೆ ಕಾರ್ಯದರ್ಶಿಯಾಗಿ ಶ್ರೀ ಶ್ರೀಕಾಂತ್ ಆಯ್ಕೆಯಾದರು.

ನೂತನ ಪದಾಧಿಕಾರಿಗಳಿಗೆ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಶಾಲೆಯ ಶೈಕ್ಷಣಿಕ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸುವುದು, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೋಷಕರ ಸಹಭಾಗಿತ್ವವನ್ನು ಬಲಪಡಿಸುವುದು ಹಾಗೂ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡುವ ಸಂಕಲ್ಪವನ್ನು ಸಭೆಯಲ್ಲಿ ವ್ಯಕ್ತಪಡಿಸಲಾಯಿತು.
ಸಭೆಯಲ್ಲಿ  ನೂತನ ಪದಾಧಿಕಾರಿಗಳು ಶಾಲೆಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.