ರೋಟರಿ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
ಕಿನ್ನಿಗೋಳಿ: ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸರಕಾರಿ ಪ್ರೌಢಶಾಲೆ ನಡುಗೋಡು ಇಲ್ಲಿನ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಾಂತಿ ಭಟ್ ಯೋಗದ ಮಹತ್ವ ಹಾಗೂ ಅದರ ಪ್ರಯೋಜನಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿ, ಯೋಗವನ್ನು ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳುವಂತೆ ಕರೆ ನೀಡಿದರು.
ಯೋಗ ತರಬೇತಿದಾರ ಶ್ರೀಮತಿ ಮಧುಶ್ರೀಯವರು ವಿವಿಧ ಯೋಗಾಸನಗಳು ಮತ್ತು ಪ್ರಾಣಾಯಾಮಗಳನ್ನು ವಿದ್ಯಾರ್ಥಿಗಳಿಂದ ಮಾಡಿಸಿ ಯೋಗಾಭ್ಯಾಸದ ಮಹತ್ವವನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಖಜಾಂಚಿ ರೋ.ಶರತ್ ಶೆಟ್ಟ,
ದೈಹಿಕ ಶಿಕ್ಷಣ ಶಿಕ್ಷಕ ಶ್ರೀಮತಿ ವಿಂಧ್ಯಾ,ಉಪಮುಖ್ಯೋಪಾಧ್ಯಾಯಿನಿ ಶ್ರೀ ಲಕ್ಷ್ಮಿ ನಾರಾಯಣ ಭಟ್, ಶಾಲಾಶಿಕ್ಷಕ, ಶಿಕ್ಷಕೇತರ ವೃಂದ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುನಿತಾ ಗುರುರಾಜ್ ಸ್ವಾಗತಿಸಿದರು. ಶ್ರೀಮತಿ ಅಶ್ಮಿತಾ ವಂದನಾರ್ಪಣೆಗೈದರು.ಶ್ರೀಮತಿ ಸರಿತಾ ಕಾರ್ಯಕ್ರಮ ನಿರೂಪಿಸಿದರು.