ದುಶ್ಚಟ ಮುಕ್ತ ಸಮಾಜ ನಿರ್ಮಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯ
ಕಿನ್ನಿಗೋಳಿ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ).ಬಜಪೆ ಯೋಜನಾ ಕಚೇರಿ ವ್ಯಾಪ್ತಿಯ ಕಿಲ್ಪಾಡಿ ವಲಯದ ಎಸ್ ಕೊಡಿ ಕಾರ್ಯ ಕ್ಷೇತ್ರದ ಶ್ರೀ ರಾಮಕೃಷ್ಣ ಪೂಜಾ ಕೈಗಾರಿಕಾ ತರಬೇತಿ ಸಂಸ್ಥೆ ತಪೋವನ ತೊಕೂರು ಸಹಯೋಗದೊಂದಿಗೆ ತಂಬಾಕು ವಿರೋಧಿ ದಿನ ಕಾರ್ಯಕ್ರಮ ನಡೆಯಿತು.
ಮಂಗಳೂರು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಸುಖಲತಾ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಸಂಸ್ಥೆಯ ಪ್ರಾಂಶುಪಾಲ ಹರಿ ಎಚ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ದುಶ್ಚಟ ಮುಕ್ತ ಸಮಾಜ ನಿರ್ಮಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯ ವಾದುದು ಎಂದರು.
ಮೂಲ್ಕಿ ಆರಕ್ಷಕ ಠಾಣಾ ಹೆಡ್ ಕಾನ್ಸ್ಟೇಬಲ್ ಯಶವಂತ್ ಕುಮಾರ್ ವಿದ್ಯಾರ್ಥಿಗಳಿಗೆ ತಂಬಾಕು ಹಾಗೂ ಮಾದಕ ವಸ್ತು ದುಶ್ಚಟಗಳ ಬಗ್ಗೆ ಮಾಹಿತಿ ನೀಡಿ, ದುಶ್ಚಟಮುಕ್ತ ಸಮಾಜ ನಿರ್ಮಿಸುವಲ್ಲಿ ತಮ್ಮ ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಿದರು.
ಜಿಲ್ಲಾ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಭುವನಾಬಿರಾಮ ಉಡುಪ ಯೋಜನೆಯ ಹತ್ತು ಹಲವು ಕಾರ್ಯ ಕ್ರಮಗಳ ಅನುಷ್ಠಾನ ಗಳ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯ ಧನಂಜಯ ಶೆಟ್ಟಿಗಾರ್ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಜ್ಪೆ ತಾಲೂಕಿನ ಯೋಜನಾಧಿಕಾರಿ ಗಿರೀಶ್ ಕುಮಾರ್, ವಲಯ ಅಧ್ಯಕ್ಷ ಲಕ್ಷ್ಮೀ ನಾರಾಯಣ ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ವಿಶಾಲಾಕ್ಷಿ ಸ್ವಾಗತಿಸಿ, ಧನ್ಯವಾದನಿತ್ತರು. ವಲಯ ಮೇಲ್ವಿಚಾರಕಿ ಲಲಿತಾ ಕಾರ್ಯಕ್ರಮ ನಿರೂಪಿಸಿದರು.