Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ರಿ ಮೂಲ್ಕಿ ಹಳೆಯಂಗಡಿ ವಲಯದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

ಮೂಲ್ಕಿ:ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ರಿ ಮೂಲ್ಕಿ ಹಳೆಯಂಗಡಿ ವಲಯದ ಆಶ್ರಯದಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಮೂಲ್ಕಿ ಬಿಲ್ಲವ ಸಂಘದಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಕೆ ಎಸ್ ಟಿ ಎ ದ.ಕ   ಜಿಲ್ಲೆಯ ಅಧ್ಯಕ್ಷ ಜಯಂತ್ ಉರ್ಲಾಂಡಿ, ಮೂಲ್ಕಿ ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿ ಜಯ ಕುಮಾರ್ ಕುಬೆವೂರು ,ಕೆ ಎಸ್ ಟಿ ಎ ಕ್ಷೇತ್ರ ಸಮಿತಿ ಅಧ್ಯಕ್ಷ ರವಿ ಜೆ ಅಮೀನ್,ವಲಯ ಅಧ್ಯಕ್ಷ  ಪ್ರೀತಿಕಾ ಡಿ, ಶಕಿಲಾ ಎಂ, ಕಾರ್ಯದರ್ಶಿಗಳಾದ ಸುಜಾತ ರಾವ್,ಅಶ್ವಿನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೀತಿಕಾ ಡಿ ಸ್ವಾಗತಿಸಿದರು.ಶಕಿಲಾ ಎಂ ಧನ್ಯವಾದ ನೀಡಿದರು.  ಉದಯ ಅಮೀನ್ ಮಟ್ಟು ಕಾರ್ಯಕ್ರಮ ನಿರೂಪಿಸಿದರು.