Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಮೂಲ್ಕಿ: ಕೆಂಚನಕೆರೆ ಬಳಿ ಕಾರಿಗೆ ಲಾರಿ ಡಿಕ್ಕಿ -ಸಂಚಾರ ಅಸ್ತವ್ಯಸ್ತ

ಮುಲ್ಕಿ: ಕಾರಿಗೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾದ ಘಟನೆ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ಅಂಗರಗುಡ್ಡೆ  ತಿರುವಿನಲ್ಲಿ  ನಡೆದಿದೆ.

ಕೈಕಂಬದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಕೆಂಚನಕೆರೆ ತಿರುವಿನಲ್ಲಿ ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ 
ಅಪಘಾತದ ರಭಸಕ್ಕೆ ಕಾರಿನ ಎದುರು ಭಾಗಕ್ಕೆ ಹಾನಿಯಾಗಿದೆ. ಈ ಸಂದರ್ಭ ಸ್ಥಳದಲ್ಲಿ ಮಾತಿನ ಚಕಮುಕಿ ನಡೆದಿದ್ದು ವಾಹನ ಸಂಚಾರ ಅಸ್ತವ್ಯಸ್ತ ಉಂಟಾಯಿತು. ಕೂಡಲೇ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಎರಡು ವಾಹನಗಳನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ.
ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ತಿರುವು ಅಪಾಯಕಾರಿಯಾಗಿದ್ದು ಸರಿಯಾದ ದಾರಿದೀಪದ ವ್ಯವಸ್ಥೆ ಇಲ್ಲದೆ ಮತ್ತಷ್ಟು ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.