ಕೊಳಂಬೆ ಬೈಲಾ ಬಿಡು ಪ್ರದೇಶದಲ್ಲಿ ಕೈಗಾರಿಕೆ ಸ್ಥಾಪನೆಗಾಗಿ ಖಾಸಗಿ ಜಾಗ ಸಮತಟ್ಟು ,ಸ್ಥಳೀಯರ ಸಮಸ್ಯೆಗೆ ಸ್ಪಂದಿಸಿ,ನಾಗರೀಕರ ಹಿತರಕ್ಷಣಾ ವೇದಿಕೆ ಒತ್ತಾಯ
ಬಜಪೆ:ಮಂಗಳೂರು ತಾಲೂಕಿನ ಕಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಂಬೆ ಬೈಲಾ ಬಿಡು ಪ್ರದೇಶದಲ್ಲಿ ಬೃಹತ್ ಕೈಗಾರಿಕೆ ಸ್ಥಾಪನೆಗಾಗಿ ಖಾಸಗಿ ಜಾಗವನ್ನು ಸಮತಟ್ಟು ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಸ್ಥಳೀಯ ನಿವಾಸಿಗಳಿಗೆ ಆಗಬಹುದಾದ ಅನ್ಯಾಯವನ್ನು ಮನಗಂಡ ಬಜ್ಪೆ ನಾಗರಿಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಸಿರಾಜ್ ಬಜ್ಪೆ ನೇತೃತ್ವದಲ್ಲಿ ಮಂಗಳೂರು ತಹಶೀಲ್ದಾರರ ಸಮ್ಮುಖದಲ್ಲಿ ಅನ್ಯಾಯಕ್ಕೆ ಒಳಗಾಗಿರುವ ಕುಟುಂಬಕ್ಕೆ ಸಂಬಂಧಪಟ್ಟ ಕಂಪನಿಯಿಂದ ಸೂಕ್ತ ಪರಿಹಾರ ಮತ್ತು ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. ಯಾವುದೇ ಕಾರಣಕ್ಕೂ ಆ ಕುಟುಂಬಕ್ಕೆ ಅನ್ಯಾಯವಾಗಬಾರದು. ಕುಟುಂಬವನ್ನು ಸ್ಥಳಾಂತರ ಮಾಡುವುದಾದರೆ ಆ ಕುಟುಂಬಕ್ಕೆ ಸೂಕ್ತ ಪರಿಹಾರನೀಡಿ ಜೀವನೋಪಾಯಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು . ಅವರಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಒಂದು ವೇಳೆ ಸಂಬಂಧಪಟ್ಟ ಕಂಪನಿ ಯಿಂದ ಸೂಕ್ತ ಪರಿಹಾರ ನೀಡದಿದ್ದರೆ, ಬಜ್ಪೆ ನಾಗರಿಕ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಸ್ಥಳೀಯರೊಂದಿಗೆ ಸೇರಿ ದೊಡ್ಡ ಮಟ್ಟದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸಿರಾಜ್ ಬಜ್ಪೆ ಹೇಳಿದರು.ಈ ಸಂದರ್ಭದಲ್ಲಿ ವೇದಿಕೆಯ ಪ್ರಧಾನ ಕಾರ್ಯದರ್ಶಿ ನಿಸಾರ್ ಕರಾವಳಿ,ಗ್ರಾ.ಪಂ.ಮಾಜಿ ಅಧ್ಯಕ್ಷ ವಿಜಯ ಗೋಪಾಲ ಸುವರ್ಣ ,ವಿವಿಧ ಸಂಘಸಂಸ್ಥೆಯ ಮುಖಂಡರುಗಳು, ಸ್ಥಳೀಯ ನಾಯಕರಾದ ವಿಶ್ವನಾಥ ,ಮಂಗಳೂರು ತಹಶೀಲ್ದಾರ್ ಸುರೇಶ್ ಬಾಬು ಸ್ಥಳೀಯ ಪಂಚಾಯತ್ ಆಡಳಿತಾಧಿಕಾರಿ ,ಪಿ ಡಿ ಓ ಸೌಮ್ಯ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು .