Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಭಾರಿ ಮಳೆ-ಗಾಳಿಯಿಂದ ಮನೆಗೆ ಹಾನಿ, ಮುಖಂಡರ ಭೇಟಿ; ತಕ್ಷಣ ಪರಿಹಾರಕ್ಕೆ ಆಗ್ರಹ

ಬಜಪೆ:ಮಂಗಳೂರು ತಾಲೂಕಿನ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳಂಬೆ ಗ್ರಾಮದ ಕಲ್ಲೋಣಿ (ಕಲ್ಲೋಳೆ) ಪ್ರದೇಶದಲ್ಲಿರುವ ರಾಧಾಕೃಷ್ಣ ಅವರ ಮನೆ ಇತ್ತೀಚೆಗೆ ಸುರಿದ ಭಾರಿ ಮಳೆ ಹಾಗೂ ಗಾಳಿಗೆ ಹಾನಿಯಾಗಿದ್ದು, ಅಪಾಯದ ಸ್ಥಿತಿಗೆ ತಲುಪಿದೆ. ಮನೆಯ ಕೆಲವು ಭಾಗಗಳು ಈಗಾಗಲೇ ಕುಸಿದಿದ್ದು, ಉಳಿದ ಭಾಗವೂ ಯಾವುದೇ ಕ್ಷಣದಲ್ಲಿ ಕುಸಿಯುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ. ಅಲ್ಲದೆ  ಮನೆಯಲ್ಲಿರುವ  ಕೆಲವರು ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿದೆ.

 ಪರಿಸ್ಥಿತಿಯನ್ನು ಮನಗಂಡ ಕಂದಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಿಜಯ ಸುವರ್ಣ, ದಕ್ಷಿಣ ಕನ್ನಡ ಜಿಲ್ಲಾ ಇಂಟಕ್ ಪ್ರಧಾನ ಕಾರ್ಯದರ್ಶಿ ನಿಸಾರ್ ಕರಾವಳಿ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಹಾಗೂ ವಕೀಲ ವಿನೋದ್ ಪೂಜಾರಿ, ಕಂದಾವರ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಶಾಂತಾ ಹಾಗೂ ಕೆಪಿಸಿಸಿ ಸಾಮಾಜಿಕ ಜಾಲತಾಣದ ಹಫೀಸ್ ಕೊಳಂಬೆ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಬಳಿಕ ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡಿ, ಸಂತ್ರಸ್ತ ಕುಟುಂಬಕ್ಕೆ ಕೂಡಲೇ ಅಗತ್ಯ ಪರಿಹಾರ ಹಾಗೂ ಸುರಕ್ಷಿತ ವಸತಿ ಸೇರಿದಂತೆ ಸರ್ಕಾರದಿಂದ ದೊರೆಯಬೇಕಾದ ಎಲ್ಲಾ ನೆರವನ್ನು ತುರ್ತಾಗಿ ಒದಗಿಸಬೇಕೆಂದು  ಆಗ್ರಹಿಸಿದರು.