ಬಂಟ್ವಾಳ:ಶಾಲಾ ಬಸ್ ಮೇಲೆ ಮರ ಬಿದ್ದು ವಿದ್ಯಾರ್ಥಿನಿ ಸಾವು,ಇಬ್ಬರಿಗೆ ಗಾಯ
ಬಂಟ್ವಾಳ:ಚಲಿಸುತ್ತಿದ್ದ ಶಾಲಾ ಬಸ್ ನ ಮೇಲೆ ಮರವೊಂದು ಬಿದ್ದ ಪರಿಣಾಮ ವಿದ್ಯಾರ್ಥಿಯೊರ್ವಳು ಸಾವನ್ನಪ್ಪಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬಂಟ್ವಾಳದ ಬರಿಮಾರು ಗ್ರಾಮದ ಕಲ್ಲೇಟಿ ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ.ಚಿರಣ್ವಿ(6)ಮೃತ ವಿದ್ಯಾರ್ಥಿನಿ.ಚಿರಣ್ವಿ ಕಲ್ಲಡ್ಕದ ಶ್ರೀ ರಾಮ ಶಾಲೆಯ ವಿದ್ಯಾರ್ಥಿನಿಯಾಗಿದ್ದಳು.ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ.