Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಬಿ ಸಿ ರೋಡ್ ನಲ್ಲಿ ಯುವತಿಯ ಬರ್ಭರ ಹತ್ಯೆ,ಯುವಕ ಪರಾರಿ

ಮಂಗಳೂರು:ಬಸ್‌ ಗಾಗಿ ಕಾಯುತ್ತಿದ್ದ ಯುವತಿಗೆ ವ್ಯಕ್ತಿಯೋರ್ವ   ಆಯುಧದಿಂದ  ಬರ್ಭರವಾಗಿ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ  ಜು.16 ರ ಸಂಜೆ 6 ರ  ಸುಮಾರಿಗೆ ಬಿ.ಸಿ.ರೋಡ್ ನ ಕೆಎಸ್‌ಆರ್‌ಟಿಸಿ ಹೊಸ ಬಸ್‌ ನಿಲ್ದಾಣದ ಬಳಿ
ನಡೆದಿದೆ. 

ಯುವತಿಯನ್ನು ಹತ್ಯೆಗೈದ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.ಗಂಭೀರವಾಗಿ ಗಾಯಗೊಂಡ ಯುವತಿಯನ್ನು ತಕ್ಷಣವೇ  ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಯುವತಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. 

 ಆರೋಪಿಯು ಚೇತನ್ ಎಂಬುದಾಗಿ ತಿಳಿದುಬಂದಿದ್ದು, ಯುವತಿಯ ದೂರದ ಸಂಬಂಧಿ ಹಾಗೂ ಯುವತಿಯನ್ನು ಏಕಪಕ್ಷೀಯ ಪ್ರೀತಿಸುತ್ತಿದ್ದ ಎಂದು ತಿಳಿದುಬಂದಿರುತ್ತದೆ.

ಬಂಟ್ವಾಳ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.