ಬಾಲ ಸಂರಕ್ಷಣಾ ಕೇಂದ್ರದಲ್ಲಿ ಅಡುಗೆ ಮನೆ ಉದ್ಘಾಟನೆ
ಮಂಗಳೂರು: ಲಯನ್ಸ್ ಜಿಲ್ಲೆ 317 Dಯ ಗವರ್ನರ್ ಕುಡ್ಪಿ ಅರವಿಂದ ಶೆಣೈಯವರು ಗುರುಪುರದ ವಜ್ರದೇಹಿ ಮಠದ ಶ್ರೀ ಹನುಮ ಬಾಲ ಸಂರಕ್ಷಣಾ ಕೇಂದ್ರದಲ್ಲಿ ನೂತನವಾಗಿ ಸ್ಥಾಪಿಸಲಾದ ಅಡುಗೆ ಮನೆಯನ್ನು ಉದ್ಘಾಟಿಸಿದರು.
ಸಂಪೂರ್ಣ ಸುಸಜ್ಜಿತ ಅಡುಗೆಮನೆಯನ್ನು ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಾಲ್‌ಬೈಲ್, ಲಯನ್ಸ್ ಕ್ಲಬ್ಸ್ ಇಂಟರ್‌ನ್ಯಾಷನಲ್ ಫೌಂಡೇಶನ್ (LCIF)ನ ಸಹಯೋಗದೊಂದಿಗೆ ದಾನ ಮಾಡಿದರು.
ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಉದಾತ್ತ ಕೊಡುಗೆಗಾಗಿ ಅವರನ್ನು ಆಶೀರ್ವದಿಸಿದರು.
ಲಯನ್ಸ್ ಕ್ಲಬ್ ಕೊಡಿಯಾಲ್‌ಬೈಲ್ ಅಧ್ಯಕ್ಷ ಮೋಹನ್ ಕೊಪ್ಪಲ್, ಬಾಲಕೃಷ್ಣ ಹೆಗ್ಡೆ, ಕಿಶೋರ್ ಡಿ. ಶೆಟ್ಟಿ, ಚಂದ್ರಹಾಸ ಶೆಟ್ಟಿ, ಚರಣ್ ಆಳ್ವ, ಸತ್ಯೇಂದ್ರ ಭಟ್ ಮತ್ತು ನರೇಶ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.