ಕೆರೆಯಂತಾದ ಹಳೆಯಂಗಡಿ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ-ವಾಹನ ಸಂಚಾರ ದುಸ್ತರ
ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಜಂಕ್ಷನ್ ಭಾರೀ ಮಳೆಗೆ ಕೆರೆಯಂತಾಗಿದ್ದು ವಾಹನ ಸಂಚಾರ ದುಸ್ತರವಾಗಿ ಪರಿಣಮಿಸಿದೆ
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಗೊಂಡ ಬಳಿಕ ಕಳೆದ ಹಲವಾರು ವರ್ಷಗಳಿಂದ ಹಳೆಯಂಗಡಿ ಜಂಕ್ಷನ್ ಹೆದ್ದಾರಿ ಬದಿ ಸೂಕ್ತ ಸರ್ವಿಸ್ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಇಲ್ಲದೆ ಅವ್ಯವಸ್ಥೆಗಳ ಆಗರವಾಗಿದೆ
ಕಳೆದ ವರ್ಷದ ಹಿಂದೆ ಹಳೆಯಂಗಡಿ ಗ್ರಾಮ ಪಂಚಾಯತ್ ವತಿಯಿಂದ ಈ ಭಾಗದಲ್ಲಿ ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಕಲ್ಪಿಸಿದ್ದು ,ಈ ಬಾರಿ ಚರಂಡಿ ಮುಚ್ಚಿ ಹೋಗಿರುವುದರಿಂದ ಸರಾಗವಾಗಿ ನೀರು ಹರಿಯದೆ ವಾಹನ ಸವಾರರಿಗೆ ತೊಂದರೆಯಾಗಿದೆ.
ಹಳೆಯಂಗಡಿ ಹೆದ್ದಾರಿಯಲ್ಲಿ ಸರ್ವಿಸ್ ರಸ್ತೆ ಕಾಮಗಾರಿ ಇನ್ನೂ ಆರಂಭಗೊಂಡಿಲ್ಲ. ಸದಾ ಬ್ಯುಸಿ ಆಗಿರುವ ಹಳೆಯಂಗಡಿ ಜಂಕ್ಷನ್ ಬಳಿಯ ಮೂರು ಬಸ್ ನಿಲ್ದಾಣಗಳು ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ
ಎಲ್ಲಿ ನೋಡಿದರೂ ತ್ಯಾಜ್ಯ ನೀರು, ಕಸದ ಕೊಂಪೆ ಸ್ವಚ್ಛತೆಯನ್ನು ಅಣಕಿಸುತ್ತಿದೆ
ಇದರಿಂದಾಗಿ ಪರಿಸರ ದುರ್ವಾಸನೆ ಜೊತೆಗೆ ಮಾರಕ ರೋಗಗಳು ಹರಡುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ
ಕೂಡಲೇ ಹೆದ್ದಾರಿ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಂಡು ಸ್ವಚ್ಛತೆಗೆ ಆದ್ಯತೆ ನೀಡುವುದರ ಜೊತೆಗೆ ಹೆದ್ದಾರಿಯಲ್ಲಿ ಸರ್ವಿಸ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ