ಕಟೀಲು : ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಕು.ಜಿಷಾ, ಕು. ರಿತಿಕಾ, ಕು. ಮಿತ್ರಾ, ಕು. ಶಿವಾನಿ ಇವರನ್ನೊಳಗೊಂಡ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರೌಢಶಾಲಾ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.