Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಜುಲೈ 24 ರಂದು ಕಿನ್ನಿಗೋಳಿ ಯುಗಪುರುಷ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣಾ ಸಮಾರಂಭ


ಕಿನ್ನಿಗೋಳಿ:  79ನೇ ವರ್ಷಾಚರಣೆಯಲ್ಲಿರುವ "ಯುಗಪುರುಷ"ದ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣ ಸಮಾರಂಭ, ಕೊ. ಅ. ಉಡುಪ ಪ್ರಶಸ್ತಿ ಪ್ರದಾನ, ವೇದವಿದ್ವಾಂಸರ ಸಂಮಾನ,  ಕೃತಿ ಬಿಡುಗಡೆ  ಸಮಾರಂಭ, ವಿದ್ಯಾರ್ಥಿವೇತನ ವಿತರಣೆಯು ಜುಲೈ 24ರಂದು ಸಂಜೆ 4-30ಕ್ಕೆ  ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ನಡೆಯಲಿದೆ.   ಮೂಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್  ಕಾರ್ಯಕ್ರಮದ ಅಧ್ಯಕ್ಷತೆ  ವಹಿಸಲಿದ್ದು,  ಶ್ರೀಕ್ಷೇತ್ರ ಕಟೀಲಿನ ಪ್ರಧಾನ ಅರ್ಚಕ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ  ಆಶೀರ್ವಚನ ನೀಡಲಿರುವರು.  ಪ್ರದೀಪಕುಮಾರ್ ಕಲ್ಕೂರರವರು ಸಂಸ್ಮರಣ ಭಾಷಣ ಮಾಡಲಿರುವರು. ಯುಗಪುರುಷ ಪ್ರಕಟಣಾಲಯದಿಂದ ಪ್ರಕಟಿತ ಪಿ.ವಿ.ಪ್ರದೀಪ್‌ಕುಮಾರ್ ಕಥಾಬಿಂದು ರಚಿತ ಅದಿತಿ ಕೃತಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ| ಹರಿಕೃಷ್ಣ ಪುನರೂರು ಇವರು ಬಿಡುಗಡೆಗೊಳಿಸಲಿರುವರು. ಸಾಹಿತಿ ಚಿದಂಬರ ಬೈಕಂಪಾಡಿ ಅವರಿಗೆ ಕೊ. ಅ. ಉಡುಪ ಪ್ರಶಸ್ತಿ ನೀಡಿ ಹಾಗೂ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ.ಮೂ.ರಾಮದಾಸ ಆಚಾರ್ಯ ಅವರನ್ನು ಕಮಲಾಕ್ಷಿ ಉಡುಪ ಸ್ಮರಣಾರ್ಥ ವೇದ ವಿದ್ವಾಂಸರ ನೆಲೆಯಲ್ಲಿ ಗೌರವಿಸಲಾಗುವುದು. ಮುಖ್ಯ ಅತಿಥಿಗಳಾಗಿ ಮುಂಬಯಿ ಉದ್ಯಮಿಗಳಾದ ತಾಳಿಪಾಡಿ ರಾಮಚಂದ್ರ ಶೆಟ್ಟಿ, ಪೃಥ್ವಿರಾಜ್ ಆಚಾರ್ಯ, ಕಿನ್ನಿಗೋಳಿ ಪಟ್ಟಣ ಪಂಚಾಯತ್ ಅಧ್ಯಕ್ಷ ಗುರುರಾಜ್ ಮಲ್ಲಿಗೆಯಂಗಡಿ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ಭಾಗವಹಿಸಲಿರುವರು. ಕೃತಿಕಾರ ಪಿ.ವಿ.ಪ್ರದೀಪ್‌ಕುಮಾರ್, ಡಾ| ನಯನಾಭಿರಾಮ ಉಡುಪ ಉಪಸ್ಥಿತರಿರುವರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದ.ಕ.ಜಿಲ್ಲೆಯ ಸಹಕಾರದೊಂದಿಗೆ ಖ್ಯಾತ ಕಲಾವಿದರಿಂದ  ಯಕ್ಷಗಾನ ನಡೆಯಲಿದೆ ಯುಗಪುರುಷದ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.