Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಹಳೆಯಂಗಡಿ:ಅಯೋಧ್ಯೆಹುಂಡಿ ಕಳವು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಆ. 1ರಂದು ಕಿನ್ನಿಗೋಳಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪಂಜಿನ ಮೆರವಣಿಗೆ ಹಾಗೂ ಪ್ರತಿಭಟನೆ- ವಸಂತ್ ಬೆರ್ನಾಡ್

ಮುಲ್ಕಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಸೊರಕೆ ನಿರ್ದೇಶನದಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಮಿಥುನ್ ಎಂ ರೈ ನೇತೃತ್ವದಲ್ಲಿ ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಆಶ್ರಯದಲ್ಲಿ ಮುಲ್ಕಿ ಮತ್ತು ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಹಕಾರದಿಂದ ಅಯೋಧ್ಯೆ ಶ್ರೀರಾಮ ಮಂದಿರದ ಹುಂಡಿ ಕಳವು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಆ. 1ರಂದು ಸಂಜೆ 6 ಗಂಟೆಗೆ ಕಿನ್ನಿಗೋಳಿ ರಾಜಾಂಗಣದಿಂದ ಬಸ್ ನಿಲ್ದಾಣದವರೆಗೆ ಬೃಹತ್ ಪಂಜಿನ ಮೆರವಣಿಗೆ ಹಾಗೂ ಪ್ರತಿಭಟನಾ ಸಭೆ  ನಡೆಯಲಿದೆ ಎಂದು ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಸಂತ್ ಬೆರ್ನಾಡ್ ಹೇಳಿದರು
ಅವರು ಮುಲ್ಕಿ ಹಾಗೂ ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ  ಹಳೆಯಂಗಡಿಯ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು 
ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಮಾತನಾಡಿ ರಾಜ್ಯದ ಪ್ರತಿಯೊಂದು ದೇವಸ್ಥಾನಗಳ ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ಅನ್ಯ ಧರ್ಮದ ಕಾರ್ಯಕ್ರಮಗಳಿಗೆ ಉಪಯೋಗಿಸುತ್ತಾರೆ ಎಂದು ಬಿಜೆಪಿಗರ ಅಪಪ್ರಚಾರಕ್ಕೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ ಬಳಿಕ  ಬಿಜೆಪಿಗರು ಮುಖಭಂಗಕ್ಕೀಡಾಗಿದ್ದರು
ಹಿಂದುತ್ವ ಅಜೆಂಡದಿಂದ  ಅಧಿಕಾರಕ್ಕೆ ಬಂದ ಬಿಜೆಪಿ ಪಕ್ಷವು ಲಕ್ಷಾಂತರ ಭಕ್ತಾದಿಗಳ ದೇಣಿಗೆಯಿಂದ ನಿರ್ಮಾಣಗೊಂಡ ಪವಿತ್ರ ಕ್ಷೇತ್ರ ಅಯೋಧ್ಯೆಯಲ್ಲಿ ನಡೆದ ಹುಂಡಿ ಕಳ್ಳತನದ ಬಗ್ಗೆ ಮೌನ ವಹಿಸಿದೆ. ಅಯೋಧ್ಯೆ ಹುಂಡಿ ಕಳ್ಳತನ ಭಕ್ತರಿಗೆ ಮಾಡಿದ ಮೋಸ ಹಾಗೂ ಅವರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಕಾಂಗ್ರೆಸ್ ಪಕ್ಷ ಈಗಾಗಲೇ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಅದರಂತೆ ಕಿನ್ನಿಗೋಳಿಯಲ್ಲಿ ಆ. 1ರಂದು ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ಹಾಗೂ ಪ್ರತಿಭಟನಾ ಸಭೆ ನಡೆಯಲಿದೆ ಪ್ರತಿಭಟನೆಯಲ್ಲಿ ಮಾಜೀ ಸಚಿವರಾದ ಕೆ ಅಭಯಚಂದ್ರ ಜೈನ್, ವಿನಯ ಕುಮಾರ್ ಸೊರಕೆ, ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಸಂಯೋಜಕ ಪದ್ಮರಾಜ್ ಆರ್, ದ ಕ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಡೆನ್ನಿಸ್ ಡಿಸಿಲ್ವ ಉಪಸ್ಥಿತರಿರುವರು 
ಮುಖ್ಯ ಭಾಷಣಕಾರರಾಗಿ ದ.ಕ.ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬ್ಬಲಡ್ಕ ಮಾತನಾಡಲಿದ್ದಾರೆ ಎಂದರು
ಪತ್ರಿಕಾಗೋಷ್ಠಿಯಲ್ಲಿ ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ ಜೈನ್, ಮೂಡಬಿದ್ರೆ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಕುಮಾರ್ ಪೂಜಾರಿ ಇರುವೈಲು, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸುರೇಶ್ ದೇವಾಡಿಗ ಪಂಜ,ಮುಲ್ಕಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜುನಾಥ ಕಂಬಾರ, ಅಶೋಕ್ ಪೂಜಾರ, ಹಾಗೂಅನೀಶ್ ಮೂಡಬಿದ್ರೆ, ಮತ್ತಿತರರು ಉಪಸ್ಥಿತರಿದ್ದರು